ಉದ್ಯಾವರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ೭೭ನೇ ಸ್ವಾತಂತ್ರ್ಯೋತ್ಸವ ಆಚರಣೆ

ಉದ್ಯಾವರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ೭೭ನೇ ಸ್ವಾತಂತ್ರ್ಯೋತ್ಸವವನ್ನು ಸಮಸ್ತ ವಿದ್ಯಾರ್ಥಿ ಮತ್ತು ಶಿಕ್ಷಕ ವೃಂದದವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಏಜ್ಯುಕೇಶನ್‌ನ ಮುಖ್ಯ ವಾರ್ಡನ್ ಹಾಗೂ ನಿವೃತ್ತ ಏರ್ ಕಮೋಡೋರ್ ಹರೀಂದ್ರ ಕುಮಾರ್ ಧೀಮಾನ್‌ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಅವರು ಅತಿಥಿ ಭಾಷಣದಲ್ಲಿ ದೇಶವು ಹಿಂಸಾತ್ಮಕ ಹಾಗೂ ಅಹಿಂಸಾತ್ಮಕ ಕಷ್ಟಗಳನ್ನು ಸಹಿಸಿಕೊಂಡು ಗಳಿಸಿದ ಸ್ವಾತಂತ್ರ÷್ಯವನ್ನು ಉಳಿಸಿ ದೇಶದ ಉನ್ನತಿಯನ್ನು ಸಾಧಿಸಿವುದು ಯುವಜನತೆಯ ಕರ್ತವ್ಯ. ಅಭಿವೃದ್ಧಿ ಹೊಂದಿದ ತಂತ್ರಜ್ಞಾನಗಳನ್ನು ಸದುಪಯೋಗಪಡಿಸಿಕೊಂಡು ಮುನ್ನಡೆದಲ್ಲಿ ಇಂದಿನ ಯುವಜನಾಂಗಕ್ಕೆ ಉತ್ತಮ ಭವಿಷ್ಯವಿದೆ ಎಂದು ನುಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿಯವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಲಗಳ ಹಾಗೂ ದುಷ್ಚಟಗಳ ದಾಸರಾಗದೆ ಅಧ್ಯಯನ ನಡೆಸಬೇಕೆಂದು ಆಶಿಸಿದರು. ದೈಹಿಕ ಶಿಕ್ಷಕ ಶ್ರೀ ಆದರ್ಶ್ ಶೆಟ್ಟಿ ಧ್ವಜಾರೋಹಣ ಮತ್ತು ಧ್ವಜವಂದನಾ ಕಾರ್ಯಕ್ರಮ ನಿರ್ವಹಿಸಿದರು. ಉಪಪ್ರಾಂಶುಪಾಲರಾದ ಡಾ. ನಿರಂಜನ್ ರಾವ್, ಎಸ್.ಡಿ.ಎಮ್. ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ನಾಗರಾಜ್ ಎಸ್., ಕಾಲೇಜಿನ ಆಡಳಿತ ಮುಖ್ಯಾಧಿಕಾರಿಯಾದ ಡಾ. ವೀರಕುಮಾರ ಕೆ, ಕಾಲೇಜಿನ ಶೈಕ್ಷಣಿಕ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಕಾಮತ್, ಸ್ನಾತಕೋತ್ತರ ವಿಭಾಗದ ಡೀನ್ ಡಾ. ಅಶೋಕ್ ಕುಮಾರ್ ಬಿ.ಎನ್., ಸ್ನಾತಕ ವಿಭಾಗದ ಡೀನ್ ಡಾ. ರಜನೀಶ್ ವಿ. ಗಿರಿ, ಎಸ್.ಡಿ.ಎಮ್. ಆಯುರ್ವೇದ ಫಾರ್ಮಸಿಯ ಜನರಲ್ ಮ್ಯಾನೇಜರ್ ಡಾ. ಮುರಳೀಧರ ಆರ್. ಬಲ್ಲಾಳ್, ಕಾಲೇಜಿನ ಕಛೇರಿ ಅಧೀಕ್ಷಕರಾದ ಶ್ರೀ ಸಿ. ಶ್ರೀನಿವಾಸ ಹೆಗ್ಡೆ ಹಾಗೂ ಆಸ್ಪತ್ರೆಯ ವ್ಯವಸ್ಥಾಪಕರಾದ ಶ್ರೀ ನಾಗೇಶ್ ಸಿ. ಎಚ್. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಾಷ್ಟಿçÃಯ ಸೇವಾ ಯೋಜನಾ ಘಟಕದ ಅಸೋಸಿಯೇಟ್ ಡೀನ್ ಡಾ. ಯೋಗೀಶ್ ಆಚಾರ್ಯ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕುಮಾರಿ ಮೇಘನಾ ಜಿ.ಕೆ. ವಂದಿಸಿ, ಕು. ಸರ್ವಲಕ್ಷಿ÷್ಮ ಪ್ರತ್ಯುಷ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಗಾಯನದ ಮುಖಾಂತರ ಏಕತೆಯ ಭಾವವನ್ನು ಉದ್ದೀಪನಗೊಳಿಸಲಾಯಿತು.

 
 
 
 
 
 
 
 
 
 
 

Leave a Reply