ಎಸ್ಡಿಪಿಐ ನಾಯಕ ತಾಂಟ್ರೆ ನೀ ಬಾ ತಾಂಟ್ ಖ್ಯಾತಿಯ ರಿಯಾಜ್ ಫರಂಗಿಪೇಟೆ ಮನೆ ಮೇಲೆ ಎನ್ ಐ ಎ ಅಧಿಕಾರಿಗಳ ದಾಳಿ

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಮೊನ್ನೆ 33 ಕಡೆಗಳಲ್ಲಿ ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದರು. ಒಂದಷ್ಟು ಪ್ರಮುಖ ಸಾಕ್ಷ್ಯಗಳು ಈ ವೇಳೆ ಅಧಿಕಾರಿಗಳಿಗೆ ಲಭ್ಯವಾಗಿತ್ತು.

ಇನ್ನು ಇಂದು ಬೆಳ್ಳಂಬೆಳಗ್ಗೆ ಎಸ್ಡಿಪಿಐ ನಾಯಕ ತಾಂಟ್ರೆ ನೀ ಬಾ ತಾಂಟ್ ಖ್ಯಾತಿಯ ರಿಯಾಜ್ ಫರಂಗಿಪೇಟೆ ಮನೆ ಮೇಲೆ ಎನ್ ಐ ಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬಿಹಾರದಲ್ಲಿ ಇತ್ತೀಚೆಗೆ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(NIA)ಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಬಾಂಬ್ ಸ್ಪೋಟಿಸಿದ ಆರೋಪಿಗಳ ಜೊತೆ ಎಸ್.ಡಿ.ಪಿ.ಐ ನಾಯಕ ರಿಯಾಝ್ ಫರಂಗಿಪೇಟೆ ಫೋನ್ ಸಂಪರ್ಕದಲ್ಲಿದ್ದ ಎಂಬ ಆರೋಪದ ಮೇಲೆ ಇಂದು ಬೆಳಗ್ಗೆ 6 ಗಂಟೆಗೆ ಕೋರ್ಟ್ ಸರ್ಚ್ ವಾರೆಂಟ್ ಪಡೆದು ಬಂದ ಬಿಹಾರದಿಂದ ಬಂದ ನಾಲ್ಕು ಜನ ರಾಷ್ಟ್ರೀಯ ತನಿಖಾ ದಳದ(NIA) ಅಧಿಕಾರಿಗಳ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರ ಸಹಕಾರ ಪಡೆದು ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ರಿಯಾಜ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಮನೆ ಮುಂದೆ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರು ತಿಳುವಳಿಕೆ ನೀಡಿ ವಾಪಸ್ ಕಳುಹಿಸಿದ್ದಾರೆ. ಎಸ್.ಡಿ.ಪಿ.ಐ ನಾಯಕ ರಿಯಾಝ್ ಫರಂಗಿಪೇಟೆ ಆರೋಪಿಗಳ ಜೊತೆ ನೇರ ಸಂಪರ್ಕವನ್ನು ಹೊಂದಿದ್ದ ಎಂಬ ಆರೋಪದ ಮೇಲೆ ಹೆಚ್ಚಿನ ವಿಚಾರಣೆಗಾಗಿ ಬಿಹಾರ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ

 
 
 
 
 
 
 
 
 
 
 

Leave a Reply