Janardhan Kodavoor/ Team KaravaliXpress
31 C
Udupi
Friday, February 26, 2021

ಸೀತಾ ನದಿಗೆ ವಿಷವಿಕ್ಕುವ ಸ್ಥಿತಿಗೆ ಅಂತ್ಯ ಯಾವಾಗ …?-ರಾಘವೇಂದ್ರ ಪ್ರಭು,ಕವಾ೯ಲ

ಬ್ರಹ್ಮಾವರ ಮಾಬುಕಳ ಸೀತಾನದಿ ಸೇತುವೆಯ ಎರಡೂ ಬದಿಯಲ್ಲಿ ಕಸದ ರಾಶಿಯೇ ನಿಮಾ೯ಣವಾಗಿದೆ.

ಈ ಕಸವು ಸಾವಿರಾರು ಜನರಿಗೆ ನೀರು ಒದಗಿಸುವ ಸೀತಾ ನದಿಗೆ ಸೇರುತ್ತಿರುವುದು ಅತ್ಯಂತ ದುಃಖದ ವಿಚಾರ. ಸಾವ೯ಜನಿಕರು ಎಲ್ಲೆoದಲ್ಲಿ ಪ್ಯಾಸ್ಟಿಕ್ ಸಹಿತ ಕಸ ಬಿಸಾಡುವ ಸ್ಥಿತಿಯಿಂದ ಜಲಚರಗಳು ಸೇರಿದಂತೆ ಸಾವಿರಾರು ಜನರಿಗೆ ವಿಷ ಸೇರುತ್ತಿದೆ.

ಮೂರು ನಾಲ್ಕು ತಿಂಗಳ ಹಿಂದೆ ವಿವಿಧ ಸಂಘ ಸಂಸ್ಥೆಗಳು ಸೇರಿ ಸ್ವಚ್ಚತಾ ಕಾಯ೯ಕ್ರಮ ನಡೆಸಿ , ಸಾವ೯ಜನಿಕರಿಗೆ ಅರಿವು ಮೂಡಿಸಲು ಬ್ಯಾನರ್ ಅಳವಡಿಸಿದ್ದರು. ಆದರೆ ಇದೀಗ ಬ್ಯಾನರ್ ಕಾಣಿಯಾಗಿದೆ ಈ ಸ್ಥಳದಲ್ಲಿ ಕಸದ ರಾಶಿಯೇ ನಿಮಾ೯ಣವಾಗಿದೆ. ಇಲ್ಲಿ ಬಿಸಾಡುವ ಕಸವನ್ನು ನಾಯಿಗಳು ರಸ್ತೆಯಲ್ಲಿ ಚೆಲ್ಲಾಡಿ ವಾಹನಗಳು ಸಂಚರಿಸಲು ಕಷ್ಟ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಕಸದ ವಾಸನೆಯಿಂದ ರಸ್ತೆಯಲ್ಲಿ ನಡೆದಾಡುವವರು ಮೂಗು ಮುಚ್ಚಿ ಸಾಗಬೇಕಾದ ಪರಿಸ್ಥಿತಿಯಿದೆ.

ಕಸ ಬಿಸಾಡುವವರಿಗೆ ಸರಿಯಾದ ಶಿಕ್ಷೆಯಾಗಲಿ, ಈ ಪರಿಸರದಲ್ಲಿ ಸಿಸಿ ಟಿವಿ ಅಳವಡಿಸಿ ಕಸ ಬಿಸಾಡುವ ದುರುಳರಿಗೆ ಶಿಕ್ಷೆ ನೀಡಬೇಕು. ಸಾರ್ವಜನಿಕರು  ಕಸ ಬಿಸಾಡುವವರನ್ನು ನೋಡಿದಾಗ ಅವರ ಭಾವಚಿತ್ರವನ್ನು ಸಾಮಾಜಿಕ ಜಾಲ ತಾಣದಲ್ಲಿ ಹರಿಯಬಿಟ್ಟು ಜನ ಜಾಗೃತಿ ಮೂಡಿಸಬೇಕು.

ಜಿಲ್ಲಾಡಳಿತ ಸೇರಿದಂತೆ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರವು ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಈ ಪರಿಸರವನ್ನು ಅದೇ ರೀತಿ ನದಿಯನ್ನು ರಕ್ಷಣೆ ಮಾಡಬೇಕಾಗಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ 

ಉಡುಪಿ:  ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ  ಶುಕ್ರವಾರ ವಿದ್ವಾನ್ ಕಬಿಯಾಡಿ​ ​ಜಯರಾಮ ​ಆಚಾರ್ಯ  ಮಾರ್ಗ ದರ್ಶನದಲ್ಲಿ  ಆಶ್ಲೇಷಾಬಲಿ , ನವಕ ಕಲಶ, ಪ್ರಧಾನ ಹೋಮ...

ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ನೂತನ  ಅಧ್ಯಕ್ಷೆ 

ಉಡುಪಿ: ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು 2021-22 ನೇ ಸಾಲಿಗೆ 20ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಈ...

ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ಮಾರ್ಚ್,1ರಂದು ತ್ರಿಕಾಲ ಪೂಜೆ 

 ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ  ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು  ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ದಿನದ ತ್ರಿಸಂಧ್ಯಾ ಕಾಲಗಳಲ್ಲಿ  ಶ್ರೀ ದುರ್ಗಾ ಮಾತೆಗೆ ವಿಸ್ತೃತ...

ಹೆಸರಾಂತ ಆಯುರ್ವೇದ ವೈದ್ಯ ಜಿ. ಶ್ರೀನಿವಾಸ ಆಚಾರ್ಯ ನಿಧನ

ಉಡುಪಿ: ಇಲ್ಲಿನ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಪ್ರಾಚಾರ್ಯ ಡಾ. ಜಿ. ಶ್ರೀನಿವಾಸ ಆಚಾರ್ಯ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ...
error: Content is protected !!