ಉಡುಪಿಯಲ್ಲಿ ಸೇನಾ ನೇಮಕಾತಿ ರಾಲಿಗೆ ಚಾಲನೆ

ಉಡುಪಿ: ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಬುಧವಾರ ಸೇನೆ ನೇಮಕಾತಿ ರಾಲಿಗೆ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಜಿ.ಜಗದೀಶ್ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು. ಸೇನಾ ನೇಮಾಕಾತಿ ಮಂಗಳೂರು ವಿಭಾಗದ ಮುಖ್ಯಸ್ಥ ಕರ್ನಲ್ ದುಭಾಶ್ ಉಪಸ್ಥಿತರಿದ್ದರು.

ಇಂದು ಸೋಲ್ಜರ್ ಜನರಲ್ ಡ್ಯೂಟಿ ಹುದ್ದೆಗೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ 3 ಸಾವಿರ ಅಭ್ಯರ್ಥಿಗಳು ಭಾಗವಹಿಸಿದ್ದಾರೆ. 1600 ಮೀಟರ್ ಓಟ, ಜಿಗ್‌ಜಾಗ್, ಪುಲ್ ಅಪ್ಸ್, ಉದ್ದ ಜಿಗಿತ ದೈಹಿಕ ಪರೀಕ್ಷೆಗಳಲ್ಲಿ ಭಾಗವಹಿಸಿದ್ದರು. ದಾಖಲಾತಿ ಪರಿಶೀಲನೆಗೆ ಪ್ರೌಢಶಾಲೆ ವಿಭಾಗದ ದೈಹಿಕ ಶಿಕ್ಷಕರನ್ನು ನೇಮಿಸಲಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ನಾಳೆ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ರಾಲಿಯಲ್ಲಿ ಭಾಗವಹಿಸಲು ಬೇರೆ ಊರುಗಳಿಂದ ಮಧ್ಯರಾತ್ರಿ ಉಡುಪಿಗೆ ಸಾಕಷ್ಟು ಯುವಕರು ಉಡುಪಿಗೆ ಬಂದಿದ್ದರು. ಸೇನೆ ಕೋವಿಡ್ ಮಾರ್ಗಸೂಚಿ ಪ್ರಕಾರ ಮಾಸ್ಕ್ ಕಡ್ಡಾಯಗೊಳಿಸಲಾಗಿತ್ತು. ಕೋವಿಡ್ ನೆಗೆಟಿವ್ ಇದ್ದವರು ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು. ಸುಡುವ ಬಿಸಿಲಿನಲ್ಲಿಯೂ ಯುವಕರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಈ ರಾಲಿ ಇಂದಿನಿಂದ 10 ದಿನಗಳುನಡೆಯಲಿದ್ದು, 38 ಸಾವಿರ ಮಂದಿ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಕೃಷ್ಣಮಠ ಮತ್ತು ಮೆಸ್ಕಾಂ ಗುತ್ತಿಗೆ ನೌಕರರ ಸಂಘದ ವತಿಯಿಂದ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ಉಪಹಾರದ ವ್ಯವಸ್ಥೆ ಮಾಡಲಾಗಿದೆ.

 
 
 
 
 
 
 
 
 
 
 

Leave a Reply