ಅ.11: ಶೀರೂರು ಶ್ರೀವೇದವರ್ಧನತೀರ್ಥರ ಜನ್ಮನಕ್ಷತ್ರ ಮಹೋತ್ಸವ

ಉಡುಪಿಯ ಅಷ್ಟಮಠಗಳಲ್ಲೊಂದಾದ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರ  ಜನ್ಮನಕ್ಷತ್ರ ಮಹೋತ್ಸವ ಅಕ್ಟೋಬರ್ 11ರಂದು ವಿವಿಧ ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಮಹೋತ್ಸವಕ್ಕಾಗಿಯೇ ಇಲ್ಲಿನ ರಥಬೀದಿಯಲ್ಲಿ ಶೀರೂರು ಮಠದ ಮುಂಭಾಗದಲ್ಲಿ ಭವ್ಯ ಶ್ರೀಅನ್ನವಿಠಲ ವೇದಿಕೆ ನಿರ್ಮಿಸಲಾಗಿದ್ದು, ಅಂದು ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶ್ರೀಮಠದ ದಿವಾನ, ವಿದ್ವಾಂಸ ಉದಯ ಸರಳತ್ತಾಯ ತಿಳಿಸಿದ್ದಾರೆ.
ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಸಾನಿಧ್ಯ ವಹಿಸಲಿದ್ದಾರೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಗ೦ಟಿಹೊಳೆ, ಸುರೇಶ್ ಶೆಟ್ಟಿ ಗುರ್ಮೆ ಮತ್ತು ಸುನೀಲ್ ಕುಮಾರ್, ಮಾಜಿ ಶಾಸಕ ಕೆ. ರಘುಪತಿ ಭಟ್, ಮಾಜಿ ಸಚಿವರಾದ  ವಿನಯಕುಮಾರ್ ಸೊರಕೆ ಮತ್ತು ಪ್ರಮೋದ್ ಮಧ್ವರಾಜ್, ಸಮಾಜಸೇವಕ ಕೃಷ್ಣಮೂರ್ತಿ ಆಚಾರ್ಯ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಸರಳತ್ತಾಯ ತಿಳಿಸಿದರು.
 
 
 
 
 
 
 
 
 
 
 

Leave a Reply