Janardhan Kodavoor/ Team KaravaliXpress
23.6 C
Udupi
Friday, December 2, 2022
Sathyanatha Stores Brahmavara

ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ಕೆ ಸಿಂಗ್ ಭೇಟಿ

ಶಿರ್ವ: ಇಲ್ಲಿನ ಶಿರ್ವ ಸಂತ ಮೇರಿ ವಿದ್ಯಾಲಯಕ್ಕೆ 21 ಕರ್ನಾಟಕ ಬೆಟಾಲಿಯನ್ ಎನ್ ಸಿಸಿ, ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ಕೆ ಸಿಂಗ್ ಅವರ ಭೇಟಿ ನೀಡಿದರು. ಯುವ ಸೇನಾದಳದ ಕೆಡೆಟ್‍ಗಳನ್ನು ಉದ್ದೇಶಿಸಿ ಮಾತನಾಡುತ್ತಾ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಎನ್ ಸಿಸಿ ಸಹಾಯಕಾರಿ. ಎನ್‌ಸಿಸಿ ತರಬೇತಿಯಿಂದ ಕ್ಯಾಡೆಡ್ಗಳಲ್ಲಿ ದೇಶ ಸೇವೆ ಹಾಗೂ ಸಾಮಾಜಿಕ ಸೇವೆ ಮಾಡಲು ಪ್ರೇರೇಪಿಸುತ್ತದೆ. ಶಿಸ್ತುಬದ್ಧವಾದ ಜೀವನವನ್ನು ನಡೆಸಲು, ಉನ್ನತ ಉದ್ಯೋಗ ಪಡೆಯಲು ಕ್ಯಾಡೆಡ್ಗಳಿಗೆ ಎನ್‌ಸಿಸಿ ಒಂದು ವರವಾಗಿದೆ. ಈ ಸ್ಪರ್ಧಾತ್ಮಕ ಯುಗದಲ್ಲಿ ಯುವಜನರು, ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ದೃಢರಾಗಲು ಎನ್‌ಸಿಸಿಯ ವಿವಿಧ ತರಬೇತಿಗಳಲ್ಲಿ ಭಾಗವಹಿಸಿ ಪಡೆದುಕೊಳ್ಳಬಹುದು ಎಂದರು. ಇದೇ ಸಂದರ್ಭದಲ್ಲಿ ಕ್ಯಾಡೆಡ್ಗಳು ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ!ಹೆರಾಲ್ಡ್ ಮೊನೀಸ್ ರವರ ಜೊತೆಗೆ ಸಂವಹನ ನಡೆಸಿದರು.

ವೇದಿಕೆಯಲ್ಲಿ 21 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಉಡುಪಿಯ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಲೆಫ್ಟಿನೆಂಟ್ ಕರ್ನಲ್ ಆರ್ ಎಸ್ ರಾವತ್, ಟ್ರೈನಿಂಗ್ ಜೆ ಸಿ ಓ ಸುಬೇದಾರ್ ಸಂತೋಷ್ ಕುಮಾರ್ ಮತ್ತು ಶಾಲೆ ವಿಭಾಗದ ಎನ್‌ಸಿಸಿ ಅಧಿಕಾರಿ ಸೆಕೆಂಡ್ ಆಫೀಸರ್ ಜಾನ್ ವಿಲಿಯಂ ವೇಗಸ್ ಉಪಸ್ಥಿತರಿದ್ದರು.

ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ ಕುಮಾರ್ ರವರು ಪ್ರಾರ್ಥಮಿಕವಾಗಿ ಮಾತನಾಡಿ ಸರ್ವರನ್ನು ಸ್ವಾಗತಿಸಿದರು, ಸೀನಿಯರ್ ಅಂಡ್ ಆಫೀಸರ್ ಮೋಹಿತ್ ಎನ್ ಸಾಲಿಯಾನ್, ಕಂಪನಿ ಸಾರ್ಜೆಂಟ್ ಕ್ವಾಟರ್ ಮಾಸ್ಟರ್ ಆಶಿಶ್ ಪ್ರಸಾದ್, ಸರ್ಜೆಂಟ್ ದೀಪಕ್, ರಿಯಾನ್ ಡಿಸೋಜಾ ಹಾಗೂ ಕ್ಯಾಡೆಟ್ ಅನುಪ್ ನಾಯಕ್ ಸಹಕರಿಸಿದ್ದರು. ಲ್ಯಾನ್ಸ್ ಕಾರ್ಪೋರಲ್ ಶೆಟ್ಟಿಗಾರ ಹೇಮ ಶ್ರೀ ಸುದರ್ಶನ್ ವಂದಿಸಿ, ಜೂನಿಯರ್ ಅಂಡರ್ ಆಫೀಸರ್ ಲೋಬೋ ಆನ್ ರಿಯಾ ನೇವಿಲ್ ಕಾರ್ಯಕ್ರಮ ನಿರೂಪಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!