ಉಡುಪಿ : ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಭಾರತಮಾತೆಯ ವೀರ ಪರಾಕ್ರಮಿ ಪುತ್ರ, ಹಿಂದೂ ಹೃದಯ ಸಾಮ್ರಾಟ್, ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಉಡುಪಿಯ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಛತ್ರಪತಿ ಶಿವಾಜಿ ಪರಿಷತ್ತು ಉಡುಪಿ ಇವರ ಸಹಯೋಗದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶ್ರೀಮತಿ ಡಾ. ಕೆ .ವಿದ್ಯಾಕುಮಾರಿ, ಉಪನ್ಯಾಸಕ ಪುಂಡಲೀಕ ಮರಾಠೆ, ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ,ಛತ್ರಪತಿ ಶಿವಾಜಿ ಪರಿಷತ್ತು ಉಡುಪಿ ಜಿಲ್ಲಾ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply