ಸಂಸದೆ ಶೋಭಾ ಕರಂದ್ಲಾಜೆ ಕ್ರೈಸ್ತ ಸಮುದಾಯದ ಕ್ಷಮೆಯಾಚಿಸಬೇಕು

ಉಡುಪಿ: ಚರ್ಚ್ ಗಳಲ್ಲಿ ಕೋವಿಡ್ ಲಸಿಕೆ ವಿರುದ್ಧ ಪ್ರಚಾರ ಮಾಡಲಾಗುತ್ತಿದೆ ಎಂಬ ಸಂಸದೆ ಶೋಭಾ ಕರಂದ್ಲಾಜೆಯ ‌ಹೇಳಿಕೆ ಬೇಜವಾಬ್ದಾರಿಯುತವಾದುದು ಹಾಗೂ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಬಾಲಿಶ ಹೇಳಿಕೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಎಂ. ಪಿ. ಮೊಯಿದಿನಬ್ಬ ಹೇಳಿದ್ದಾರೆ. 

ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲಗೊಂಡಿರುವ ಸಂಸದರ ಸ್ವಪಕ್ಷದ ಸರಕಾರದ ವೈಫಲ್ಯತೆಯನ್ನು ಮುಚ್ಚಿ ಹಾಕಲು ಈ ಹೇಳಿಕೆ ನೀಡಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಜನರ ಈ ಸಂಕಷ್ಟ ಸಮಯದಲ್ಲಿ ಒಬ್ಬ ಜವಾಬ್ದಾರಿಯುತ ಸಂಸತ್ ಸದಸ್ಯರು ಜನರಲ್ಲಿ ಜಾಗ್ರತಿ ಮೂಡಿಸುವ ಹಾಗೂ ಜನರ ಮಧ್ಯದಲ್ಲೇ ಇದ್ದು ಜನತೆಗೆ ಧೈರ್ಯ ತುಂಬುವ ಕೆಲಸ ಮಾಡಿ ಸಂಸದರ ಸ್ಥಾನದ ಗೌರವವನ್ನು ಕಾಪಾಡಬೇಕು.ಕೂಡಲೇ ಕ್ರೈಸ್ತ ಸಮುದಾಯದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

 
 
 
 
 
 
 
 
 
 
 

Leave a Reply