Janardhan Kodavoor/ Team KaravaliXpress
32.6 C
Udupi
Tuesday, May 24, 2022
Sathyanatha Stores Brahmavara

ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಶ್ರೀಧರ ಡಿ.ಎಸ್. ಅವರಗೆ ಸಮ್ಮಾನ‌

ಸುರತ್ಕಲ್ : ತಡಂಬೈಲು ಶ್ರೀದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಏಳನೇ ವರ್ಷದ ತಾಳಮದ್ದಳೆ ಸಪ್ತಾಹದ ಸಮರೋಪ ಸಮಾರಂಭದಲ್ಲಿ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ , ಹಿರಿಯ ಯಕ್ಷಗಾನ ವಿದ್ವಾಂಸ, ಪ್ರಸಂಗಕರ್ತ, ಸಾಹಿತಿ‌ ಶ್ರೀಧರ ಡಿ.ಎಸ್ ರನ್ನು ಅಭಿನಂದಿಸಿ ಸಮ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಸಂಶೋಧಕ ಕೆ.ಎಲ್. ಕುಂಡಂತಾಯ ವಹಿಸಿದ್ದರು. ನಿವೃತ್ತ ಉಪನ್ಯಾಸಕ ನಾರಾಯಣ ಹೆಗಡೆ ಉಡುಪಿ ಅಭಿನಂದನೆಯ

ಮಾತುಗಳನ್ನಾಡಿದರು. ಯಕ್ಷಗಾನ ಸಂಘಟಕ ,ಜ್ಯೋತಿಷಿ ಮಧುಕರ ಭಾಗವತರು ಕುಳಾಯಿ, ಕಣಿಪುರ ಪತ್ರಿಕೆಯ ಸಂಪಾದಕ ನಾರಾಯಣ ಚೆಂಬಲ್ತಿಮಾರ್ ಮುಂತಾದವರು ಉಪಸ್ಥಿತರಿದ್ದರು.

ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಗುರುಗಳಾದ ಸುರತ್ಕಲ್ ವಾಸುದೇವ ರಾವ್,ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಅಧ್ಯಕ್ಷ ಸುಲೋಚನಾ ವಿ.ರಾವ್ ಉಪಸ್ಥಿತರಿದ್ದರು. ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಸರ್ವ ಸದಸ್ಯರು ಭಾಗವಹಿಸಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!