ಉಡುಪಿ ನಗರ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಚಿವ ವಿ.ಸುನಿಲ್ ಕುಮಾರ್ ಗೆ ಅಭಿನಂದನೆ

ಉಡುಪಿ : ನೂತನ ಸಚಿವ ಸಂಪುಟದಲ್ಲಿ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿ ನೇಮಕಗೊಂಡ ಕಾರ್ಕಳ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ವಿ.ಸುನಿಲ್ ಕುಮಾರ್ ಭಾನುವಾರ ಉಡುಪಿ ನಗರ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಭಿನಂದಿಸಿದರು. 

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ ಹಾಗೂ ದಿನೇಶ್ ಅಮೀನ್, ಕಾರ್ಯದರ್ಶಿ ಲಕ್ಷ್ಮಿ ಕಿನ್ನಿಮುಲ್ಕಿ ಹಾಗು ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply