ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಗೆ ಕೋವಿಡ್ ಪಾಸಿಟಿವ್

ಕಾರ್ಕಳ: ಶಾಸಕ ವಿ. ಸುನೀಲ್ ಕುಮಾರ್ ಗೆ ಶುಕ್ರವಾರ ಕೋವಿಡ್ ದೃಢಪಟ್ಟಿದೆ. ಸೋಂಕಿಗೊಳಗಾಗಿರುವ ವಿಷಯವನ್ನು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದು, ಪಾಸಿಟಿವ್ ವರದಿ ಬಂದಿದೆ. ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಆರೋಗ್ಯದ ಬಗ್ಗೆ ನಿಗಾ ವಹಿಸಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ.

 
 
 
 
 
 
 
 
 
 
 

Leave a Reply