ಕುಂದಾಪುರ ತಾಲೂಕು SVEEP ಕಾರ್ಯಕ್ರಮ, ಜಿಲ್ಲಾ ಪಂಚಾಯತ್ ಸಿ.ಇ.ಒ ಚಾಲನೆ

ಕುಂದಾಪುರ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಇಂದು ಕುಂದಾಪುರ ತಾಲೂಕು ಪಂಚಾಯತ್ ಕಚೇರಿ ಮುಂಬಾಗದಲ್ಲಿ “ಮತದಾನ ಜಾಗೃತಿ” ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರತೀಕ್ ಬಯಾಲ್ ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಕಾರ್ಯನಿರ್ವಾಹಕ ಅಧಕಾರಿಯವರು, ಜಿಲ್ಲೆಯಲ್ಲಿ 100% ಮತದಾನ ನಮ್ಮ ಗುರಿ, ಕಳೆದ ಚುನಾವಣೆಯಲ್ಲಿ ಯಾವ ಮತಗಟ್ಟೆ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿದೆ ಅಂತಹ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಇದೇ ಸಂದರ್ಭ ಕುಂದಾಪುರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜಿ.ಶಶಿಧರ್ ಇವರು ಮಾತನಾಡಿ,ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾರರು ಭಾಗವಹಿಸುವಂತೆ ಜಾಗೃತಿ ಮೂಡಿಸಬೇಕು ಹಾಗೂ ಮತದಾರರಿಗೆ ಮತದಾನದ ಮಹತ್ವ ತಿಳಿಸುವ ಕಾರ್ಯಮಾಡಬೇಕು ಎಂದರು. 

ಬಳಿಕ ರಾಷ್ಟ್ರ ಧ್ವಜ ತ್ರಿವರ್ಣ ಬಣ್ಣಗಳ ಬಲೂನುಗಳಿಗೆ ಮತದಾರರ ಜಾಗೃತಿ ಸಂದೇಶದೊಂದಿಗೆ ಹಾರಿಸುವ ಮುಲಕ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿ, ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು ಹಾಗೂ ಕಡ್ಡಾಯ ಮತದಾನದ ಅರಿವು ಮುಡಿಸುವ ಸಲುವಾಗಿ ಸಹಿ ಸಂಗ್ರಹಣೆ ಮಾಡಲಾಯಿತು. 

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳು ಶ್ರೀ ಶ್ರೀನಿವಾಸ ರಾವ್‌, 119 ಕುಂದಾಪುರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಶ್ರೀಮತಿ ರಶ್ಮಿ,ತಹಶೀಲ್ದಾರಾದ ಶ್ರೀಮತಿ ಶೋಭಾ ಲಕ್ಷ್ಮೀ, ತಾಲೂಕು ಪಂಚಾಯತಿಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ, ತಾಲೂಕು ಮಟ್ಟದ ಇಲಾಖಾಧಿಕಾರಿಗಳು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply