ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ತರಬೇತಿ ಶಿಬಿರ

ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ಮತ್ತು ಫಿಟ್ನೆಸ್ ಸೆಲ್ ಹಾಗೂ ಎನ್.ಸಿ.ಸಿ ಸಂಯುಕ್ತವಾಗಿ ಏರ್ಪಡಿಸಿದ ಯೋಗ ತರಬೇತಿ ಶಿಬಿರ ಇಂದು ನಡೆಯಿತು. 

ಕಳೆದ ಎರಡು ವಾರಗಳ ಕಾಲ ಈ ಶಿಬಿರವನ್ನು ಅಚ್ಚುಕಟ್ಟಾಗಿ ಶಿರ್ವ ವಲಯ ಪತಂಜಲಿ ಯೋಗ ಗುರು ಅನಂತರಾಯ ಶೆಣೈ ಹಾಗೂ ಶ್ರೀ ರಂಜಿತ್ ಪುನರ್ ರವರು ನೆರವೇರಿಸಿಕೊಟ್ಟರು. ಸುಮಾರು 180 ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೋನಿಸ್ ಮಾತನಾಡಿ ಎಲ್ಲರಿಗೂ ಶುಭಹಾರೈಸಿದರು.

ಯೋಗ ಮತ್ತು ಫಿಟ್ನೆಸ್ ಸೆಲ್ ನಿರ್ದೇಶಕ ಶ್ರೀ ಜೆಫ್ ಸನ್ನಿ ಡಿಸೋಜಾ, ಅಣ್ಣಯ್ಯ,ಅಧ್ಯಾಪಕ ವೃಂದ,ಆಡಳಿತ ಸಿಬ್ಬಂದಿ, ಎಲ್ಲಾ ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಸರ್ವರನ್ನು ಸ್ವಾಗತಿಸಿ- ವಂದಿಸಿ,ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply