ದ.ಕ :ಶಿಕ್ಷಕಿಯರ ಜಗಳದಿಂದ ಬೇಸತ್ತು ತಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ಸೇರಿಸಿದ ಪೋಷಕರು!

ಶಿಕ್ಷಕಿಯರ ಜಗಳದಿಂದ ಬೇಸತ್ತು ತಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಈ ಘಟನೆಯು ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕು ಸೋಣಂದೂರು ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಲ್ಲದೆ ಖಾಲಿಯಾಗಿರುವುದು ಕಂಡು ಬಂದಿದೆ.

ಸುಮಾರು 75 ವರ್ಷದ ಇತಿಹಾಸ ಇರುವ ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಸೋಣಂದೂರು ದ.ಕ. ಜಿ.ಪಂ. ಹಿ.ಪ್ರಾ.ಶಾಲೆಯಲ್ಲಿ 1ರಿಂದ 7ನೇ ತರಗತಿ ತನಕ 37 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಶಿಕ್ಷಕಿಯರ ಜಗಳದಿಂದ ಬೇಸತ್ತು ಪೋಷಕರು ತಮ್ಮ ಮಕ್ಕಳನ್ನು ಅಕ್ಕಪಕ್ಕದ ಸರ್ಕಾರಿ, ಖಾಸಗಿ ಶಾಲೆಗಳಿಗೆ ಸೇರಿಸಿದ್ದಾರೆ.

ಕಳೆದ ವರ್ಷ ಈ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಅಭಿವೃದ್ಧಿ ಪರ ಗಮನ ಹರಿಸಿತ್ತಾದರು ಈ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಖಾಲಿಯಾಗಿವೆ.

 
 
 
 
 
 
 
 
 
 
 

Leave a Reply