Janardhan Kodavoor/ Team KaravaliXpress
30.6 C
Udupi
Wednesday, August 17, 2022
Sathyanatha Stores Brahmavara

ತೆಂಕನಿಡಿಯೂರು ಗಾಂಧೀಜಿ ಜನ್ಮದಿನಾಚರಣೆ

ಉಡುಪಿ ಗಾಂಧೀಜಿಯವರ 151 ನೇ ಜನ್ಮ ದಿನಾಚರಣೆಯ ಪ್ರಯುಕ್ತ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಂತರಿಕ ಗುಣಮಟ್ಟ ಭರವಸಾ ಕೋಶ, ಎನ್.ಎಸ್.ಎಸ್., ರೋರ‍್ಸ್ ಮತ್ತು ರೇಂರ‍್ಸ್, ಯೂತ್ ರೆಡ್‌ಕ್ರಾಸ್, ದೈಹಿಕ ಶಿಕ್ಷಣ ವಿಭಾಗ, ವಿದ್ಯಾರ್ಥಿ ಸಂಘ (ರಿ), ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ (ರಿ) ಹಾಗೂ ಕಾಲೇಜು ಸ್ಟಾಫ್ ಕ್ಲಬ್ ಇದರ ಸಹಯೋಗದೊಂದಿಗೆ ಗಾಂಧಿ ಜಯತಿ ಸ್ವಚ್ಛತಾ ಅಭಿಯಾನವು ನಡೆಯಿತು.
ಉಡುಪಿ ನಗರಸಭಾ ಸದಸ್ಯ ವಿಜಯ ಕೊಡವೂರು ಉದ್ಘಾಟಿಸಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್.ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷ ಶರತ್ ಬೈಲಕೆರೆ, ಕಾಲೇಜು ಅಭಿವೃದ್ಧಿ ಸಮಿತಿ ಖಜಾಂಚಿ ದಯಾನಂದ ಶೆಟ್ಟಿ ಕೊಜಕುಳಿ ಉಪಸ್ಥಿತರಿದ್ದರು.
ಎನ್.ಎಸ್.ಎಸ್. ಘಟಕ-1 ರ ಯೋಜನಾಧಿಕಾರಿ ಡಾ. ಪ್ರಸಾದ್ ರಾವ್ ಎಂ. ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ವಂದಿಸಿದರು. ಎನ್.ಎಸ್.ಎಸ್. ಘಟಕ-2 ಇದರ ಯೋಜನಾಧಿಕಾರಿ ಮಮತಾ ಕಾರ್ಯಕ್ರಮ ನಿರ್ವಹಿಸಿದರು.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!