ಉಡುಪಿ : ಬೃಹತ್ ಪ್ರತಿಭಟನಾ ಪಾದಯಾತ್ರೆ ಮೆರವಣಿಗೆ

ಉಡುಪಿ : ಕೋಟದ ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುನಲ್ಲಿ ನಡೆದ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ರಾಜೇಶ್ ಕೊರಗ ಹಾಗೂ ಇತರರ ಮೇಲೆ ನಡೆಸಿದ ದೌರ್ಜನ್ಯದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಪಾದಯಾತ್ರೆ ಮೆರವಣಿಗೆಯು ಇಂದು ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಿಂದ ಜಿಲ್ಲಾಧಿಕಾರಿಯ ಕಛೇರಿಯವರೆಗೆ ನಡೆಸಲಾಯಿತು. 

ಪ್ರತಿಭಟನಾ ಪಾದಯಾತ್ರೆ ಮೆರವಣಿಗೆಯು ಅಂತ್ಯಗೊಂಡ ನಂತರ ಜಿಲ್ಲಾಧಿಕಾರಿ ಕೂರ್ಮ ರಾವ್ ಗೆ ಮನವಿ ಸಲ್ಲಿಸಿ ನ್ಯಾಯಯುತವಾದ ತನಿಖೆ ನಡೆಸಿ ಕೊರಗ ಸಮುದಾಯದ ಮನೆಯವರಿಗೆ ನ್ಯಾಯ ಒದಗಿಸಬೇಕಾಗಿ ಅಗ್ರಹಿಸಲಾಯಿತು. 

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಎಲ್ಲಾ ಅಧ್ಯಕ್ಷರು, ಕೆಪಿಸಿಸಿ ಸಂಯೋಜಕರು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಎಲ್ಲಾ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷರು, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಮಾಜಿ ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ಪಕ್ಷದ ಎಲ್ಲಾ ಹಿರಿಯ, ಕಿರಿಯ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply