ಉಡುಪಿ : ಉಡುಪಿ ಜಿಲ್ಲೆಯ ಡಿಸಿ ಮನ್ನಾ ಜಾಗದ ಸಮಸ್ಯೆ ಕುರಿತ ನಡೆದ ಸಭೆ

ಉಡುಪಿ : ಜಿಲ್ಲೆಯಲ್ಲಿರುವ ವಸತಿ ರಹಿತ ಪ.ಜಾತಿ ಮತ್ತು ಪಂಗಡದ ಅರ್ಹ ಎಲ್ಲಾ ಕುಟುಂಬಗಳಿಗೆ ಭೂಮಿ ನೀಡುವ ಕುರಿತಂತೆ, ಲಭ್ಯವಿರುವ ಭೂಮಿಯ ಕುರಿತು 15 ದಿನದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಇಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್ ನಲ್ಲಿ, ಉಡುಪಿ ಜಿಲ್ಲೆಯ ಡಿಸಿ ಮನ್ನಾ ಜಾಗದ ಸಮಸ್ಯೆ ಕುರಿತ ನಡೆದ ಸಭೆಯಲ್ಲಿ ಭಾಗವಹಿಸಲಾಯಿತು.

ಜಿಲ್ಲೆಯ ಪ.ಜಾತಿ ಮತ್ತು ಪಂಗಡದ ಕುಟುಂಬ ತಮಗೆ ಸ್ವಂತ ಜಾಗ ಇಲ್ಲ ಎನ್ನುವಂತಾಗಬಾರದು ಆದ್ದರಿಂದ ಜಿಲ್ಲೆಯಲ್ಲಿ ಲಭ್ಯವಿರುವ ಡಿಸಿ ಮನ್ನಾ ಭೂಮಿ, ಕಂದಾಯ ಭೂಮಿಯ ವಿವರಗಳನ್ನು ಸಂಗ್ರಹಿಸಿ ಅದರಲ್ಲಿ ಪ.ಜಾತಿ, ಪಂಗಡದ ಜನತೆಗೆ ನೀಡಬಹುದಾದ ಭೂಮಿಯ ಪ್ರಮಾಣ ಮತ್ತು ಖಾಸಗಿಯವರಿಂದ ಖರೀದಿಸಿ ನೀಡಬಹುದಾದ ಭೂಮಿ ಮತ್ತು ಭೂ ಒಡೆತನ ಯೋಜನೆಯ ಮೂಲಕ ನೀಡಬಹುದಾದ ಭೂಮಿಯ ಬಗ್ಗೆ ಎಲ್ಲಾ ತಾಲೂಕುವಾರು ಸಮಗ್ರ ವಿವರಗಳನ್ನು ನೀಡುವಂತೆ ಸೂಚಿಸಲಾಯಿತು.

ಜಿಲ್ಲೆಯಲ್ಲಿ ಭೂಮಿಯ ಅಗತ್ಯತೆ ಇರುವ ಪ.ಜಾತಿ ಪಪಂಗಡದವರ ಸಂಖ್ಯೆ, ಭೂಮಿ ಕೋರಿ ಅರ್ಜಿ ಸಲ್ಲಿಸಿರುವ ಪ.ಜಾತಿ, ಪಂಗಡದವರ ವಿವರ, ಇವರಿಗೆ ನೀಡಲು ಅಗತ್ಯವಿರುವ ಭೂಮಿಯ ಪ್ರಮಾಣ ಕುರಿತಂತೆ ಎಲ್ಲಾ ತಾಲೂಕುವಾರು ವಿವರಗಳನ್ನು ಸಂಗ್ರಹಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಯಿತು. 

 ಪ.ಜಾತಿ ಮತ್ತು ಪಂಗಡದವರಿಗೆ ಖಾಸಗಿಯವರಿಂದ ಭೂಮಿ ಖರೀದಿಸಿ ನೀಡುವ ಕುರಿತಂತೆ ಹಣದ ಕೊರತೆ ಇಲ್ಲ, ಇದಕ್ಕಾಗಿ ಅಗತ್ಯವಿರುವ ಸಂಪೂರ್ಣ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪಂಗಡದ ಯಾವುದೇ ಕುಟುಂಬ ಸ್ವಂತ ಭೂಮಿಯಿಲ್ಲದಂತೆ ಇರಬಾರದು ಆದ್ದರಿಂದ ಶೀಘ್ರದಲ್ಲಿ ಭೂಮಿಯನ್ನು ಗುರುತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.  

ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರ್ ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply