ಮಹಾ ಶಿವರಾತ್ರಿಯ ಪ್ರಯುಕ್ತ ಉಡುಪಿಯ ಪ್ರಸಿದ್ಧ ಶ್ರೀ ಅನಂತೇಶ್ವರ ಹಾಗೂ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ದೇವರು

ಶ್ರೀ ಚಂದ್ರಮೌಳಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವದ ಅಂಗವಾಗಿ ದೇವರಿಗೆ ವಿಶೇಷ ಅಭಿಷೇಕದೊಂದಿಗೆ ಸಹಸ್ರ ರುದ್ರ ಪಾರಾಯಣದೊಂದಿಗೆ ರುದ್ರಾಭಿಷೇಕವನ್ನು ಮಾಡಿ ಮಹಾಪೂಜೆ ನೆರವೇರಿಸಲಾಯಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಶ್ರೀ ಚಂದ್ರಮೌಳೇಶ್ವರ ದೇವರ ದರ್ಶನ ಪಡೆದರು.

ಶ್ರೀ ಅನಂತೇಶ್ವರ ದೇವಾಲಯದಲ್ಲಿ ವಾರ್ಷಿಕ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಸ್ತಂಭಕ್ಕೆ ವಿಶೇಷ ಅಲಂಕಾರವನ್ನು ಮಾಡಿ ಧಜಾರೋಹಣ ಮಾಡಲಾಯಿತು. ಕಲಶಾಭಿಷೇಕ ಮಾಡಿ ಮಹಾಪೂಜೆ ಮಾಡಲಾಯಿತು.

 
 
 
 
 
 
 
 
 
 
 

Leave a Reply