ಉತ್ತಮ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಸೇವಾ ಪ್ರಾಧಿಕಾರದ ಪಾತ್ರ ಕುರಿತ ಕಾರ್ಯಗಾರ

ಜನಸಾಮಾನ್ಯರಿಗೆ ಕಾನೂನು ಸೇವಾ ಪ್ರಾಧಿಕಾರ ಕಾನೂನಿನ ಅರಿವನ್ನು ಮೂಡಿಸುವುದರ ಜೊತೆಗೆ ಅವರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಕಾನೂನು ಸಲಹೆ ,ಉಚಿತ ಕಾನೂನು ಸೇವೆಗಳನ್ನು ನೀಡಿ ನ್ಯಾಯ ಒದಗಿಸುವ ಕಾರ್ಯವನ್ನು ಮಾಡಬೇಕೆಂದು ಉಪಲೋಕಾಯುಕ್ತ ಕೆ.ಎನ್ . ಫಣೀಂದ್ರ ರವರು ತಿಳಿಸಿದರು.

ಅವರು ಇಂದು ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ನ್ಯಾಯಾಂಗ ಘಟಕ ಉಡುಪಿ ಇವರು ಗಳು ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ “ಉತ್ತಮ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಸೇವಾ ಪ್ರಾಧಿಕಾರದ ಪಾತ್ರ “ಕುರಿತ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಾರ್ವಜನಿಕ ಆಡಳಿತ ಸ್ವಾಸ್ಥ ಸಮಾಜ ನಿರ್ಮಾಣ ಮಾಡಲು ಶಾಸಕಾಂಗ ಕಾರ್ಯಾಂಗ ಮಾಡುವ ಕಾರ್ಯಗಳಿಂದ ಆನೇಕ ಸಮಸ್ಯೆಗಳು ಉದ್ಭವಿಸುತ್ತವೆ. ಸಮಸ್ಯೆ ಗೊಳಗಾದ ಜನರು ನ್ಯಾಯಾಂಗದ ವ್ಯವಸ್ಥೆಯ ಮೇಲೆ ನಂಬಿಕೆ ಇಟ್ಟು ನ್ಯಾಯ ಸಿಗಬಹುದೆಂದು ಬರುತ್ತಾರೆ ನಾವು ನಿಷ್ಠೆಯಿಂದ ಅವರಿಗೆ ನ್ಯಾಯ ಒದಗಿಸುವ ಕಾರ್ಯವನ್ನು ಮಾಡಬೇಕಿದೆ ಎಂದರು.

ಜನರಿಗೆ ನ್ಯಾಯ ಕೊಡುವುದು ದೇವರು ಮಾಡುವ ಕೆಲಸ, ಈ ಕೆಲಸವನ್ನು ದೇವರು ನ್ಯಾಯಾಧೀಶರಾದ ತಮ್ಮ ಮೂಲಕ ಮಾಡಲು ಅವಕಾಶ ನೀಡಿದೆ ಈ ಪವಿತ್ರ ಸ್ಥಾನವನ್ನು ಅಲಂಕರಿಸಿದ ನೀವು ಆಂತರಿಕವಾಗಿ ಯೋಚಿಸಿ ಯೋಜನೆ ರೂಪಿಸಿಕೊಂಡು ಪ್ರಕರಣದಲ್ಲಿ ತಲಿನರಾಗಿ ಪರಿಶೀಲಿಸಿ ಕಕ್ಷಿದಾರರಿಗೆ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ನ್ಯಾಯರ್ಜನೆ ಮಾಡಬೇಕು ಎಂದರು.

ಸರ್ಕಾರ ಪ್ರತಿಯೊಬ್ಬ ಸಾರ್ವಜನಿಕರಿಗೂ ನ್ಯಾಯ ಒದಗಿಸಿ ಕೊಡಬೇಕೆಂಬ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರವನ್ನು ಸರ್ವೋಚ್ಚ ನ್ಯಾಯಾಲಯದಿಂದ ಹಿಡಿದು ತಾಲೂಕ್ ಮಟ್ಟದ ನ್ಯಾಯಾಲಗಳವರೆಗೂ ರಚಿಸಿ ಉತ್ಕೃಷ್ಟವಾದ ಜವಾಬ್ದಾರಿಯನ್ನು ನೀಡಿದೆ. ನ್ಯಾಯಾಲಯದ ಕಾರ್ಯ ದ ಜೊತೆಗೆ ನೀಡಿರುವ ಹೆಚ್ಚುವರಿ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶಾಂತ ವೀರ ಶಿವಪ್ಪ ಮಾತನಾಡಿ ಜಿಲ್ಲೆಯಲ್ಲಿ ನ್ಯಾಯಾಧೀಶರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ ಹಾಗೂ ಕಾನೂನು ಸೇವಾ ಪ್ರಾಧಿಕಾರವು ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸುತ್ತಿದೆ ಮುಂದಿನ ದಿನಗಳಲ್ಲಿ ಇನ್ನು ಉತ್ತಮವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿರಾಜ್ಯ ಲೋಕಾಯುಕ್ತ ವಿಚಾರಣೆಗಳ ಉಪನಿಬಂಧಕ ಎಂ.ವಿ.ಚೆನ್ನಕೇಶವ ರೆಡ್ಡಿ, ಲೋಕಾಯುಕ್ತ ವಿಚಾರಣೆ ಉಪನಿಬಂಧಕ ರಂಗೇಗೌಡ, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ. ಪಾಟೀಲ್, ಲೋಕಾಯುಕ್ತ ಮಂಗಳೂರು ವಿಭಾಗದ ಅಧೀಕ್ಷಕ ಸಿ.ಎ ಸೈಮನ್, ನ್ಯಾಯಾಧೀಶರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಸ್ವಾಗತಿಸಿದರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶೆ ಶರ್ಮಿಳ ನಿರೂಪಿಸಿ ವಂದಿಸಿದರು

 
 
 
 
 
 
 
 
 
 
 

Leave a Reply