ಉಡುಪಿ: ಯುವತಿ ಕುಸಿದು ಬಿದ್ದು ಸಾವು!

ಉಡುಪಿ: ಸಂಬಂಧಿಕರ ರೋಸ್ (ಕ್ರೈಸ್ತರ ಸಂಪ್ರದಾಯದಂತೆ ಮದುವೆಯ ಮುನ್ನಾ ದಿನಾ ನಡೆಯುವ ಕಾರ್ಯಕ್ರಮ) ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳು ಕುಸಿದು ಬಿದ್ದು ಅಸ್ಥಸ್ಥಗೊಂಡಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಎಂದು ಗುರುತಿಸಲಾಗಿದೆ.

ಜೋಸ್ನಾ ಅವರು ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಕಾರ್ಯಕ್ರಮಕ್ಕೆ ತೆರಳಿದ್ದು ಅಲ್ಲಿ ಸುಮಾರು 8.30 ರ ಹೊತ್ತಿಗೆ ಕುಳಿತಲ್ಲೇ ಕುಸಿದುಬಿದ್ದಿದ್ದು, ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ಜೋಸ್ನಾ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply