ಉಡುಪಿ ಜಿಲ್ಲೆಯ ರಜತ ಮಹೋತ್ಸವ ರಾಜ್ಯಪಾಲರಿಂದ ಉದ್ಘಾಟನೆ

ಉಡುಪಿ ಜಿಲ್ಲೆ ರಚನೆಯಾಗಿ ಈ ಅಗಸ್ಟ್ 25 ಕ್ಕೆ 25 ವರ್ಷ ಪೂರ್ಣಗೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ರಜತ ಮಹೋತ್ಸವ ಸಮಾರಂಭದ ಉದ್ಘಾಟನೆಯನ್ನು ರಾಜ್ಯಪಾಲರಾದ ಸನ್ಮಾನ್ಯ ಥಾವರ್ ಚಂದ್ ಗೆಹ್ಲೋಟ್ ಅವರು ನೆರವೇರಿಸಲಿದ್ದಾರೆ. ಇದರ ಪೂರ್ವ ತಯಾರಿ ಕುರಿತು ಇಂದು ದಿನಾಂಕ 19-08-2022 ರಂದು ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಇಲಾಖಾಧಿಕಾರಿಗಳೊಂದಿಗೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಪೂರ್ವ ತಯಾರಿಯನ್ನು ಪರಿಶೀಲಿಸಿ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿಗಳಾದ ವೀಣಾ, ಸಹಾಯಕ ಆಯುಕ್ತರಾದ ರಾಜು ಕೆ, ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply