ವಿದ್ಯಾರ್ಥಿನಿ ನಾಪತ್ತೆ

ಉಡುಪಿ, ಸೆಪ್ಟಂಬರ್ 22: ಪುತ್ತೂರು ಗ್ರಾಮದ ವಿಷ್ಣುಮೂರ್ತಿ ನಗರ ನಿವಾಸಿ ನಿಶಾ ಎನ್ ಎಸ್ ಆಮೀನ್ (21) ಎಂಬ ಯುವತಿಯು ಸೆಪ್ಟಂಬರ್ 20 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ
ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ದಪ್ಪ ಮೈಕಟ್ಟು, ಗೋಧಿ ಮೈಬಣ್ಣ, ಅಗಲ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು
ಸಂಪರ್ಕಿಸುವoತೆ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply