ಜಿಲ್ಲಾ ಮಟ್ಟದ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿ: ಅವಧಿ ವಿಸ್ತರಣೆ

ಉಡುಪಿ, ಅಕ್ಟೋಬರ್ 7 (ಕವಾ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18
ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978, 2574972 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು
ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply