ಉಡುಪಿ : ಶ್ರೀ ಕೃಷ್ಣಮಠಕ್ಕೆ,ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ಉಡುಪಿ : ಶ್ರೀ ಕೃಷ್ಣಮಠಕ್ಕೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ರಾಜಾಂಗಣದ ಶ್ರೀ ನರಹರಿತೀರ್ಥ ವೇದಿಕೆಯಲ್ಲಿ ಗೌರವಿಸಿ ಅನುಗ್ರಹ ಮಂತ್ರಾಕ್ಷತೆ ನೀಡಿದರು. 

ಅರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷ ಸುರೇಶ ನಾಯಕ್,ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ,ಮಠದ ವ್ಯವಸ್ಥಾಪಕ ಗೋವಿಂದರಾಜ್, ಶ್ರೀಕೃಷ್ಣ ಸೇವಾ ಸಮಿತಿಯ ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply