ಉಡುಪಿ ಜಿಲ್ಲೆ: 835 ಮಂದಿ ಗುಣಮುಖ

ಉಡುಪಿ: ಜಿಲ್ಲೆಯಲ್ಲಿ 766 ಮಂದಿಯಲ್ಲಿ ಕೊರೋನಾ ವರಿದಿಯಾಗಿದೆ.ಉಡುಪಿ ತಾಲೂಕು- 285, ಕುಂದಾಪುರ- 293, ಕಾರ್ಕಳ- 186 ಮತ್ತು ಹೊರ ಜಿಲ್ಲೆಯ 2 ಮಂದಿಗೆ ಸೋಂಕು ದೃಢಪಟ್ಟಿದೆ.

835 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 50608 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಜಿಲ್ಲೆಯಲ್ಲಿ 5942 ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ 4 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ 322 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಮೇ 27 ರಂದು 3396 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 582738 ಮಂದಿಯನ್ನು ಪರೀಕ್ಷಿಸಲಾಗಿದೆ.

 
 
 
 
 
 
 
 
 
 
 

Leave a Reply