ಉಡುಪಿ : ಆಗಸ್ಟ್ 19ರಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜನಾಶೀರ್ವಾದ ಯಾತ್ರೆ

ಉಡುಪಿ : ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಶಯದಂತೆ ದೇಶಾದ್ಯಂತ ಕೇಂದ್ರ ಸಚಿವರ ನೇತೃತ್ವದಲ್ಲಿ ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ “ಜನಾಶೀರ್ವಾದ ಯಾತ್ರೆ”ಯು ಆಗಸ್ಟ್ 16ರಿಂದ ಪ್ರಾರಂಭಗೊಂಡಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಆಗಸ್ಟ್ 16ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಕರ್ನಾಟಕ ರಾಜ್ಯದಾದ್ಯಂತ ನಾಲ್ಕು ಕೇಂದ್ರ ಸಚಿವರ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯು ಉಡುಪಿ ಜಿಲ್ಲೆಗೆ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಆಗಸ್ಟ್ 18ರಂದು ಸಂಜೆ ಜಿಲ್ಲಾ ವ್ಯಾಪ್ತಿಯ ಹೆಬ್ರಿಗೆ ಆಗಮಿಸಲಿದೆ. 

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನೂತನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಜನಾಶೀರ್ವಾದ ಯಾತ್ರೆಯನ್ನು ಸ್ವಾಗತಿಸಲಾಗುವುದು ಎಂದು ಹೇಳಿದರು.

ಆಗಸ್ಟ್ 19ರಂದು ವಿವಿಧ ನಿಯೋಜಿತ ಕಾರ್ಯಕ್ರಮಗಳ ಜೊತೆಗೆ ಬೆಳಿಗ್ಗೆ ಗಂಟೆ 11.00ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿರುವ ಜನಾಶೀರ್ವಾದ ಯಾತ್ರೆಯ ಸಮಾವೇಶ ಮತ್ತು ನೂತನ ಕೇಂದ್ರ ಸಚಿವೆ ಅಭಿನಂದನಾ ಸಮಾರಂಭದಲ್ಲಿ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯ ನೂತನ ಸಚಿವರು, ಶಾಸಕರು, ಪಕ್ಷದ ಮುಖಂಡರು ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಉಪಸ್ಥಿತರಿದ್ದರು.

ಜನಾಶೀರ್ವಾದ ಯಾತ್ರೆಯ ಅಂಗವಾಗಿ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಆಗಸ್ಟ್ 18 ಮತ್ತು 19ರಂದು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ:

ಆಗಸ್ಟ್ 18, ಬುಧವಾರ

ಸಂಜೆ 7.15ಕ್ಕೆ: ಹೆಬ್ರಿಯಲ್ಲಿ ಸ್ವಾಗತ

ಸಂಜೆ 8.30ಕ್ಕೆ: ಹಿರಿಯಡ್ಕದಲ್ಲಿ ಸ್ವಾಗತ

ಸಂಜೆ 9.30ಕ್ಕೆ: ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಬೇಟಿ

ರಾತ್ರಿ 10.00ಕ್ಕೆ: ಭೋಜನ – ಉಡುಪಿಯಲ್ಲಿ ವಾಸ್ತವ್ಯ

ಆಗಸ್ಟ್ 19, ಗುರುವಾರ

ಬೆಳಿಗ್ಗೆ 8.00ಕ್ಕೆ: ಉಡುಪಿ ಶ್ರೀಕೃಷ್ಣ ಮಠ ಸಂದರ್ಶನ

ಬೆಳಿಗ್ಗೆ 8.30ಕ್ಕೆ: ಸ್ವಾಮೀಜಿಯವರ ದರ್ಶನ

ಬೆಳಿಗ್ಗೆ 9.30ಕ್ಕೆ: ಉಪಹಾರ

ಬೆಳಿಗ್ಗೆ 10.00ಕ್ಕೆ: ಪತ್ರಿಕಾ ಗೋಷ್ಠಿ (ಉಡುಪಿ ಡಯಾನಾ ಹೋಟೆಲ್)

ಬೆಳಿಗ್ಗೆ 10.30ಕ್ಕೆ: ಉಡುಪಿ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದಲ್ಲಿ ಪುಷ್ಪಾರ್ಚನೆ

ಬೆಳಿಗ್ಗೆ 11.00ಕ್ಕೆ: ಲಸಿಕಾ ಕೇಂದ್ರಕ್ಕೆ ಬೇಟಿ

ಬೆಳಿಗ್ಗೆ 11.30ಕ್ಕೆ: ಉಡುಪಿ ಪುರಭವನದಲ್ಲಿ ‘ಜನಾಶೀರ್ವಾದ ಯಾತ್ರೆ ಸಮಾವೇಶ’ ಮತ್ತು ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ಅಭಿನಂದನಾ ಸಮಾರಂಭ*

ಮಧ್ಯಾಹ್ನ 1.00ಕ್ಕೆ: ಕೇಂದ್ರ ಸರಕಾರದ ವಿವಿಧ ಯೋಜನೆಗಳ ಆಯ್ದ ಫಲಾನುಭವಿಗಳೊಂದಿಗೆ ಸಂವಾದ – ಭೋಜನ (ಮಿನಿ ಟೌನ್ ಹಾಲ್, ಉಡುಪಿ)

ಮಧ್ಯಾಹ್ನ 2.00ಕ್ಕೆ: ಬ್ರಹ್ಮಾವರದ ಪಡಿತರ ವಿತರಣಾ ಕೇಂದ್ರಕ್ಕೆ ಬೇಟಿ

ಮಧ್ಯಾಹ್ನ 3.00ಕ್ಕೆ: ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ

 
 
 
 
 
 
 
 
 
 
 

Leave a Reply