ಉಡುಪಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕರೋನಕ್ಕೆ ಬಲಿ

ಉಡುಪಿ: ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್ ಬನವಾಸಿ ಕೋವಿಡ್‌ನಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ‌.

ಉಡುಪಿ ಸಹಾಯಕ ನಿರ್ದೇಶಕರಾಗಿ ಕಳೆದ ವರ್ಷ ಅಧಿಕಾರ ಸ್ವೀಕರಿಸಿ,ಪಡುಬಿದ್ರಿ ಬೀಚ್ ಗೆ ಬ್ಲೂ ಫ್ಲಾಗ್ ಅಂತಾರಾಷ್ಟ್ರೀಯ ಮಾನ್ಯತೆ ಸಿಗುವಲ್ಲಿ ಶ್ರಮಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಸೇವಾ ಮುಂಬಡ್ತಿ ಹೊಂದಿದ್ದರು. ಇಲಾಖೆ ಸೇರುವ ಮುನ್ನ ಪತ್ರಕರ್ತರಾಗಿಯು ಸೇವೆ ಸಲ್ಲಿಸಿದ್ದರು.ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.

ಈ ಬಗ್ಗೆ ಡಿಸಿ ಬೇಸರಕೊಂಡಿದ್ದು, ಅತ್ಯಂತ ನಿಷ್ಠೆಯ ಸಹೋದ್ಯೋಗಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್ ರನ್ನು ಕಳೆದುಕೊಂಡು ಹೃದಯ ಭಾರವಾಗಿದೆ ಇವರ ಆತ್ಮಕ್ಕೆ ಭಗವಂತ ಶಾಂತಿಯನ್ನು ಕರುಣಿಸಲಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸಂತಾಪ ಸೂಚಿಸಿದ್ದಾರೆ.

 
 
 
 
 
 
 
 
 
 
 

Leave a Reply