ಫಿಟ್ ರಹೋ ಉಡುಪಿ’75 ಕೀ.ಮೀ. ಮ್ಯಾರಥಾನ್ ಓಟ ಯಶಸ್ವಿ- ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಭಾಗಿ

ಉಡುಪಿ : ನೇಶನ್ ಫಸ್ಟ್ ತಂಡ “ಫಿಟ್ ರಹೋ ಉಡುಪಿ” ಎಂಬ ಧ್ಯೇಯವಾಕ್ಯದೊಂದಿಗೆ ಆಯೋಜಿಸಿದ 2 ದಿನಗಳ “75 ಕೀ.ಮೀ. ಮ್ಯಾರಥಾನ್” ಓಟ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದರಲ್ಲಿ ಪಾಲ್ಗೊಂಡವರನ್ನು, ಸಹಕರಿಸಿದವರನ್ನು ಅಭಿನಂದಿಸುವ ಕಾರ್ಯಕ್ರಮ ಸೆ.11 ರಂದು ಮಣಿಪಾಲದ ಹೊಟೇಲ್ ಕಂಟ್ರಿ ಇನ್ ಅಂಡ್ ಸೂಟ್ಸ್ ನಲ್ಲಿ ನಡೆಯಿತು.

ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ನೇಶನ್ ಫಸ್ಟ್ ತಂಡದ “ಫಿಟ್ ರಹೋ ಉಡುಪಿ” ಓಟದಲ್ಲಿ ಭಾಗವಹಿಸಿದವರಿಗೆ ಹಾಗೂ ಸಹಕರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಬಳಿಕ ನೇಶನ್ ಫಸ್ಟ್ ತಂಡದ ವಿದ್ಯಾರ್ಥಿ ವಿದ್ಯಾರ್ಥಿನಿಯರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ನೇಶನ್ ಫಸ್ಟ್ ತಂಡದ ಮೇಜರ್ ಪ್ರಕಾಶ್ ರಾವ್, ಸೂರಜ್ ಕಿದಿಯೂರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply