ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಉಡುಪಿ ಜಿಲ್ಲೆಯಲ್ಲಿ ಅನ್ ಲಾಕ್~ ಜಿಲ್ಲಾಧಿಕಾರಿ ಜಿ. ಜಗದೀಶ್ 

ಉಡುಪಿ ಜಿಲ್ಲೆಯಲ್ಲಿ ಕೋವಿಡ್ –19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲ ಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಕಟ್ಟು ನಿಟ್ಟಿನ ನಿರ್ಬಂಧಗಳ ಪರಿಣಾಮಕಾರಿ ಅನುಷ್ಟಾನದಿಂದಾಗಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಪಾಸಿಟಿವಿಟಿ ೫%. *ಜಿಲ್ಲೆಯಾದ್ಯಂತ ಸಂಜೆ 7.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ವರೆಗೆ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ.

*ಶುಕ್ರವಾರ ಸಂಜೆ 7.00 ಗಂಟೆಯಿಂದ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ  ಕಟ್ಟು ನಿಟ್ಟಿನ ವಾರಂತ್ಯದ ಕರ್ಪ್ಯೂ ಜಾರಿಯಲ್ಲಿರುತ್ತದೆ. *ಜಿಲ್ಲೆಯಲ್ಲಿ ಬಸ್ಸುಗಳ ಸಂಚಾರವನ್ನು ಆಸನ ಸಾಮರ್ಥ್ಯದ 50% ರೊಂದಿಗೆ ಕೋವಿಡ್‌ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.  ಬಸ್‌ ಗಳಲ್ಲಿ ನಿಂತುಕೊಂಡು ಪ್ರಯಾಣ ಮಾಡಲು ನಿರ್ಭಂಧಿಸಲಾಗಿದೆ.

ಕೋವಿಡ್–19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಸರ್ಕಾರದ ಆದೇಶ ಮತ್ತು ಸೇರ್ಪಡೆ ಆದೇಶಗಳನ್ನು ಯಥಾವತ್ತಾಗಿ ಹಾಗೂ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ, ಆದೇಶವನ್ನು ದಿನಾಂಕ: 05.07.2021ರ ಸಂಜೆ 5.00 ಗಂಟೆಯವರೆಗೆ ಮುಂದುವರಿ ಸಲಾಗಿದೆ. ಹಾಗೂ ಕೆಳಕಂಡ ಹೆಚ್ಚುವರಿ ಚಟುವಟಿಕೆಗಳನ್ನು ಅನುಮತಿಸಲಾಗಿದೆ.

*ಎಲ್ಲಾ ಉತ್ಪಾದನಾ ಘಟಕಗಳು/ ಕೈಗಾರಿಕಾ ಸಂಸ್ಥೆಗಳು /ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ 50% ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯಾಚರಿಸಲು ಅನುಮತಿಸಲಾಗಿದೆ. ಆದಾಗ್ಯೂ ಉಡುಪು (Garment) ತಯಾರಿಕೆಯಲ್ಲಿ ತೊಡಗಿರುವ ಘಟಕಗಳು/ ಕೈಗಾರಿಕಾ ಸಂಸ್ಥೆಗಳು / ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ 30% ರಷ್ಟು ಸಿಬ್ಬಂದಿಗಳೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಕಾರ್ಯಚರಿಸಲು ಅನುಮತಿಸಲಾಗಿದೆ.

*ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಎಲ್ಲ ಅಂಗಡಿಗಳಿಗೆ ಪ್ರತಿ ದಿನ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಕೊಂಡು ತೆರೆಯಲು ಅನುಮತಿಸಲಾಗಿದೆ. ಆದರೆ ಹವಾನಿಯಂತ್ರಿತ ಅಂಗಡಿಗಳು, ವಾಣಿಜ್ಯ ಸಂಕೀರ್ಣ, ಮಾಲ್ ಗಳು ಕಾರ್ಯನಿರ್ವಹಿಸಲು ಅವಕಾಶವಿರುವುದಿಲ್ಲ. 

ಮನೆಯಿಂದ ಸಾರ್ವಜನಿಕರು ಹೊರ ಬರುವುದನ್ನು ಕಡಿಮೆ ಮಾಡಲು ಕೋವಿಡ್ ನಿರ್ವಹಣೆ ಗಾಗಿರುವ ರಾಷ್ಟೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಎಲ್ಲಾ ವಸ್ತುಗಳ 24*7 ಹೋಂ ಡೆಲಿವರಿ ಸೇವೆಗಳನ್ನು ಪ್ರೋತ್ಸಾಹಿಸಲಾಗುವುದು.

*(ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸಿದ್ದಲ್ಲಿ ಸದ್ರಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು ಮತ್ತು ಎಲ್ಲಾ ಅಂಗಡಿಗಳಲ್ಲಿ ಮಾಲಿಕರು /ಸಿಬ್ಬಂದಿ ಮತ್ತು ಗ್ರಾಹಕರು ಮಾಸ್ಕ್‌ ಧರಿಸುವದು ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಲು ಮಾರ್ಕುಗಳನ್ನು ಹಾಕುವುದು ಕಡ್ಡಾಯ ವಾಗಿದೆ. ಯಾವುದೇ ಅಂಗಡಿಯಲ್ಲಿ ಜನ ಜಂಗುಳಿ ಇರತಕ್ಕದ್ದಲ್ಲ. ತಲ್ಲಪಿದಲ್ಲಿ ಅಂತಹ ಅಂಗಡಿಗಳ ಪರವಾನಿಗೆಯನ್ನು ಕೋವಿಡ್‌ ಮುಗಿಯುವ ತನಕ ಅಮಾನತ್ತಿನಲ್ಲಿಡಲಾಗುವುದು. 

*ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಹೋಟೆಲ್‌, ರೆಸ್ಟೋರೆಂಟ್‌, ಬಾರ್ ಮತ್ತು ಕ್ಲಬ್ ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತುಕೊಂಡು ಆಹಾರ ಸೇವಿಸಲು ಬೆಳಿಗ್ಗೆ 6-00 ಗಂಟೆಯಿಂದ ಸಂಜೆ 5.00 ಗಂಟೆವರೆಗೆ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.

ಪಬ್ ಗಳಿಗೆ ಅನುಮತಿ ಇರುವುದಿಲ್ಲ. ಶೇ 50 ಸಾಮರ್ಥ್ಯದೊಂದಿಗೆ ಲಾಡ್ಜ್‌ ಗಳು ಮತ್ತು ರೆಸಾರ್ಟ್‌ ಗಳಿಗೆ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಕಡ್ಡಾಯವಾಗಿ ಅನುಸರಿಸುವ ಷರತ್ತುಗಳೊಂದಿಗೆ ಅವಕಾಶ ನೀಡಲಾಗಿದೆ.(ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸಿದ್ದಲ್ಲಿ ಸದ್ರಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು)

*ಚಲನಚಿತ್ರ/ ಟಿ. ವಿ ಧಾರವಾಹಿಗಳಿಗೆ ಸಂಬಂಧಿಸಿದಂತೆ *-ಷರತ್ತುಗಳೊಂದಿಗೆ ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. *ಕಟ್ಟಡ ನಿರ್ಮಾಣ ಮತ್ತು ದುರಸ್ಥಿಗೆ (Construction activities/ Civil repair) ಅನುಮತಿಸಿದೆ. ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳೊಂದಿಗೆ ವ್ಯವಹರಿಸುವ ಅಂಗಡಿಗಳು / ಸಂಸ್ಥೆಗಳಿಗೆ ಬೆಳಿಗ್ಗೆ 6-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ ಕೋವಿಡ್ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಅನುಮತಿಸಿದೆ.

*ವಾಕಿಂಗ್ ಮತ್ತು ಜಾಗಿಂಗ್‌ ಗಾಗಿ ಬೆಳಿಗ್ಗೆ 5ರಿಂದ ಸಂಜೆ6 ಗಂಟೆಯವರೆಗೆ ಉದ್ಯಾನವನ ಗಳನ್ನು ಕೋವಿಡ್‌ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ತೆರೆಯಲು ಅನುಮತಿಸಿದೆ. ಆದರೆ ಯಾವುದೇ ಗುಂಪು ಚಟುವಟಿಕೆಗಳನ್ನು ಅನುಮತಿಸ ಲಾಗುವುದಿಲ್ಲ.

*ಶೇ. 50 ಸಾಮರ್ಥ್ಯದೊಂದಿಗೆ ಕೋವಿಡ್‌ ಸಮುಚಿತ ವರ್ತನೆಯನ್ನುಮತ್ತು ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು(SOP) ಅನುಸರಿಸುವ ಷರತ್ತುಗಳೊಂದಿಗೆ ಜಿಮ್‌ ಗಳಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ. *ಗರಿಷ್ಠ 2 ಪ್ರಯಾಣಿಕರೊಂದಿಗೆ ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳಿಗೆ ಸಂಚರಿಸಲು ಅನುಮತಿಸಿದೆ.

*ಷರತ್ತುಗಳೊಂದಿಗೆ ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗಳಿಗೆ ಅನುಮತಿ ನೀಡಲಾಗಿದೆ.        (ಒಳಾಂಗಣ ಕ್ರೀಡೆಗಳಿಗೆ ಅವಕಾಶ ಇರುವುದಿಲ್ಲ) *ಎಲ್ಲ ಸರ್ಕಾರಿ/ ಖಾಸಗಿ ಕಛೇರಿಗಳಿಗೆ ಸಿಬ್ಬಂದಿಯ ಶೇ. 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.

ಆದಾಗ್ಯೂ, ಅಗತ್ಯ ಮತ್ತು ತುರ್ತು ಸೇವೆಗಳೊಂದಿಗೆ ವ್ಯವಹರಿಸುವ ಕಚೇರಿಗಳಿಗೆ ಅವುಗಳ ಅಗತ್ಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ಅನುಮತಿಸಿದೆ. ಸಾಧ್ಯವಾದಷ್ಟು ಮನೆಯಿಂದ ಕೆಲಸವನ್ನು ನಿರ್ವಹಿಸಲು ಪ್ರೋತ್ಸಾಹಿಸುವುದು.

*ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿ ಗಳಿಗೆ ಅನುಮತಿಸಲಾಗಿದೆ. *“ಈಗಾಗಲೇ ನಿಗದಿಯಾಗಿರುವ ಮದುವೆಯನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು /ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ಈ ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು ನಡೆಸಲು ಅನುಮತಿಸಲಾಗಿದೆ.

*ವಿವಾಹಗಳನ್ನು ಆಯೋಜಿಸುವವರು ವಿವಾಹ ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.

*ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ ಕಾರ್ಯಕ್ರಮಕ್ಕೆ 40 ಪಾಸ್‌ ಗಳನ್ನು ನೀಡಬೇಕು. *ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ. *ಮದುವೆ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್‌ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸು ವುದು ಮತ್ತು ಅವರ ಪಾಸ್‌ಗಳನ್ನು ಅಧಿಕೃತ ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು.

*ಶವಸಂಸ್ಕಾರ /ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ನಿರ್ವಹಿಸಲು ಅನುಮತಿಸಿದೆ.

ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, Disaster Management Act 2005 , Karnataka Epidemic Diseases act 2020 ಮತ್ತು IPC ಸೆಕ್ಷನ್ 188 ಪ್ರಕಾರ ನಿಯಮಾನು ಸಾರ ಕಠಿಣ ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ.

 
 
 
 
 
 
 
 
 
 
 

Leave a Reply