ಉಡುಪಿ ಪರ್ಯಾಯೋತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಆಹ್ವಾನ

ಉಡುಪಿ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯನ್ನು ಉಡುಪಿ ಪರ್ಯಾಯೋತ್ಸವಕ್ಕೆ ಪರ್ಯಾಯೋತ್ಸವ ಸಮಿತಿ ಗೌರವ ಕಾರ್ಯಧ್ಯಕ್ಷ, ಶಾಸಕ ಕೆ. ರಘುಪತಿ ಭಟ್ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು.

ವಿಶ್ವ ಪ್ರಸಿದ್ಧ ಉಡುಪಿ ಪರ್ಯಾಯ ಸುಗಮವಾಗಿ ನಡೆಸಲು ಅನುಕೂಲ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಭಾರತಿ ಶೆಟ್ಟಿ ಮತ್ತು ಪರ್ಯಾಯೋತ್ಸವ ಸಮಿತಿಯ ಉಪಾಧ್ಯಕ್ಷ ಶ್ರೀಪತಿ ಭಟ್ ಉಚ್ಚಿಲ, ಪ್ರಧಾನ ಕಾರ್ಯದರ್ಶಿ ವಿಷ್ಣು ಪ್ರಸಾದ್ ಪಾಡಿಗಾರ್, ಆರ್ಥಿಕ ಸಮಿತಿ ಸಂಚಾಲಕ ಜಯಪ್ರಕಾಶ್ ಕೆದ್ಲಾಯ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply