ಉಡುಪಿ : ಸೆ. 27 ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಉಡುಪಿ : ಪ್ರವಾಸೋದ್ಯಮ ಇಲಾಖೆ,ಜಿಲ್ಲಾಡಳಿತ, ಮಲ್ಪೆ ಅಭಿವೃದ್ದಿ ಸಮಿತಿ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಇವರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸೆ. 27 ರಂದು ಬೆಳಗ್ಗೆ 10.30 ಗಂಟೆಗೆ ‘ಸುಸ್ಥಿರ ಹಾಗೂ ಅಂತರ್ಗತ ಬೆಳವಣಿಗೆಗೆ ಪ್ರವಾಸೋದ್ಯಮ’ ಎಂಬ ಸಂದೇಶದೊಂದಿಗೆ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ರಜತ್ರಾದಿ, ಮಣಿಪಾಲದಲ್ಲಿ ಆಚರಿಸಲಾಗುವುದು.

ಕಾರ್ಯಕ್ರಮವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜೀವಶಾಸ್ತ್ರ ಮತ್ತು ಪರಿಸರ, ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಕೆ.ಜಯಪ್ರಕಾಶ್ ಹೆಗ್ಡೆ, ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ,

ಶಾಸಕರುಗಳಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಪ್ರತಾಪ್ ಚಂದ್ರ ಶೆಟ್ಟಿ, ಲಾಲಾಜಿ ಆರ್. ಮೆಂಡನ್, ಬಿ.ಎಂ ಸುಕುಮಾರ ಶೆಟ್ಟಿ, ಆಯನೂರು ಮಂಜುನಾಥ, ಎಸ್.ಎಲ್ ಭೋಜೆಗೌಡ, ಡಾ|ತೇಜಸ್ವಿನಿ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿ.ಣಿ, ನಗರ ಸಭೆ ಅಧ್ಯಕ್ಷೆ ಸುಮಿತ್ರ ಆರ್.ನಾಯಕ್ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕರ‍್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್‌ಪಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಶೆಟ್ಟಿ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

 
 
 
 
 
 
 
 
 
 
 

Leave a Reply