ಉಡುಪಿಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಕೋವಿಡ್ ಲಸಿಕೆ

ಉಡುಪಿ: ಜಿಲ್ಲಾಡಳಿತ, ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾ ಘಟಕ ವತಿಯಿಂದ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ದಮನಿತ ಮಹಿಳೆಯರಿಗೆ ಉಡುಪಿ ಅರ್ಬನ್ ಹೆಲ್ತ್ ಕೇರ್ ಸೆಂಟರ್‌ನಲ್ಲಿ ಕೋವಿಡ್ ವ್ಯಾಕ್ಸಿನೇಶನ್ ಕ್ಯಾಂಪ್ ಅನ್ನು ಇಂದು ಏರ್ಪಡಿಸಲಾಗಿತ್ತು.

ಈ ಕ್ಯಾಂಪ್ ನಲ್ಲಿ ಉಡುಪಿ ತಾಲೂಕಿನ 21 ಲಿಂಗತ್ವ ಅಲ್ಪಸಂಖ್ಯಾತರು ಕೋವಿಡ್ ವ್ಯಾಕ್ಸಿನ್ ಪಡೆದರು.ಕ್ಯಾಂಪ್‌ನ ನೋಡೆಲ್ ಅಧಿಕಾರಿ ಹಾಗೂ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಚಂದ್ರಿಕಾ ಎಸ್ ನಾಯಕ್,ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ್ ಸಂಜು,ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹೇಮಂತ್,ಜಿಲ್ಲಾಏಡ್ಸ್ ನಿಯಂತ್ರಣಾ ಘಟಕದ ಸಂಯೋಜಕ ಮಹಾಬಲೇಶ್ವರ್ ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply