ದಿ.26ರಂದು ಉಡುಪಿಯಲ್ಲಿ ಲಭ್ಯವಿರುವ ಲಸಿಕೆಯ ಮಾಹಿತಿ

ಉಡುಪಿ: ನಾಳೆ ಲಭ್ಯವಿರುವ ಲಸಿಕೆಯ ಕುರಿತು ಮಾಹಿತಿ ಹೀಗಿದೆ.

ದಿನಾಂಕ. 26/05/2021 ರಂದು ಉಡುಪಿ ನಗರ ಪ್ರದೇಶದಲ್ಲಿ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಯಾವುದೇ ಕೋವಿಡ್ ಲಸಿಕೆ ಲಭ್ಯವಿರುವುದಿಲ್ಲ.

ದಿನಾಂಕ:26/05/2021 ರಂದು ಉಡುಪಿ ನಗರ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು ಊಅW/ಈಐW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಗಳಿಗೆ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ (200 ಡೋಸ್) ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ) (250 ಡೋಸ್), ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)(150 ಡೋಸ್) ಬೆಳಿಗ್ಗೆ 9.30 ರಿಂದ ಅಪರಾಹ್ನ 4.00 ಗಂಟೆಯವರೆÀಗೆ ಕೋವಿಶೀಲ್ಡ್ ಲಸಿಕೆ ಪ್ರಥಮ ಡೋಸ್ ನೀಡಲಾಗುವುದು. 

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು /ಊಅW/ಈಐW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಊಅW/ಈಐW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಪೂರ್ಣಗೊಂಡು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ:26.05.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

ಈ ಕೆಳಗಿನ ರಾಜ್ಯ ಸರಕಾರ ಗುರುತಿಸಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ಅಧಿಕಾರಿಗಳು ಮತ್ತು ಸಿಬ್ಬಂದಿಗಳು (ಅನುಬಂಧ 1 ರಲ್ಲಿ ಇರುವಂತೆ) ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ತಮ್ಮ ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ತಮ್ಮ ಗುರುತಿನ ಚೀಟಿ ಅಥವಾ ಅನುಬಂಧ-3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡನೊಂದಿಗೆ ದಿನಾಂಕ:26.05.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

 

ಸರಕಾರದಿಂದ ನೀಡಲ್ಪಟ್ಟ ಅಂಗವಿಕಲರ ಗುರುತಿನ ಚೀಟಿ ಅಥವಾ ಅನುಬಂಧ-3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವ ವಿಕಲಚೇತನರು (ಮಾನಸಿಕ ಅಸ್ವಸ್ಥತೆ ಸೇರಿದಂತೆ) .

• ಚಿತಾಗಾರ/ಸ್ಮಶಾನ/ರುದ್ರ ಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಸ್ವಸಹಾಯಕರು-ಅನುಬಂಧ 3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವವರು

• ಕೋವಿಡ್ ಕರ್ತವ್ಯ ನಿರ್ವಹಿಸಲು ಆದೇಶ ಪತ್ರ ಪಡೆದ ಅಥವಾ ಅನುಬಂಧ 3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದ ಕೋವಿಡ್ ಕರ್ತವ್ಯ ನಿರ್ವಹಿಸಿದ ಶಿಕ್ಷಕರು

• ಸರಕಾರಿ ಸಾರಿಗೆ ಸಿಬ್ಬಂದಿ

• ಬ್ಯಾಡ್ಜ್ ಹೊಂದಿರುವ ಆಟೋ ಚಾಲಕರು ಮತ್ತು ಕ್ಯಾಬ್ ಚಾಲಕರು

• ವಿದ್ಯುತ್ ಮತ್ತು ನೀರು ಸರಬರಾಜು ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು

• ಅಂಚೆ ಇಲಾಖೆಯ ಸಿಬ್ಬಂದಿಗಳು

• ಬೀದಿ ಬದಿಯ ವ್ಯಾಪಾರಸ್ಥರು(ಗ್ರಾಮ ಪಂಚಾಯತ್ ಅಥವಾ ನಗರ ಸ್ಥಳೀಯ ಆಡಳಿತದಿಂದ ಅನುಬಂಧ-3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವವರು).

• ಭದ್ರತೆ ಮತ್ತು ಕಛೇರಿಗಳ ಹೌಸ್ ಕೀಪಿಂಗ್ ಸಿಬ್ಬಂದಿಗಳು- ಅನುಬಂಧ-3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವವರು

• ನ್ಯಾಯಾಂಗ ಅಧಿಕಾರಿಗಳು ಮತ್ತು ಸಿಬ್ಬಂದಿಗಳು 

• ವಯೋವೃದ್ಧರ/ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಆರೈಕೆದಾರರು- ಅನುಬಂಧ-3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವವರು

• ಮಕ್ಕಳ ಸಂರಕ್ಷಣಾಧಿಕಾರಿಗಳು ಮತ್ತು ಸಿಬ್ಬಂದಿಗಳು

• ಮಾಧ್ಯಮದವರು

• ಆಯಿಲ್ ಇಂಡಸ್ಟ್ರೀ ಮತ್ತು ಗ್ಯಾಸ್ ಸರಬರಾಜು ಮಾಡುವವರು(ಪೆಟ್ರೋಲ್ ಬಂಕ್, ಕರ್ಮಚಾರಿ ಒಳಗೊಂಡಂತೆ)- ಅನುಬಂಧ-3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವವರು

• ಆಸ್ಪತ್ರೆಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು- ಅನುಬಂಧ-3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವವರು

• ಆಸ್ಪತ್ರೆಗೆಗಳಿಗೆ ಆಕ್ಸಿಜನ್/ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವ ಸಿಬ್ಬಂದಿಗಳು- ಅನುಬಂಧ-3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವವರು

• ಅಧೀಕೃತ ಗುರುತಿನ ಚೀಟಿ ಹೊಂದಿರದ ಫಲಾನುಭವಿಗಳು(ವೃದ್ದಾಶ್ರಮ ವಾಸಿಗಳು, ನಿರ್ಗತಿಕರು)- ಅನುಬಂಧ-3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವವರು

• ಭಾರತೀಯ ಆಹಾರ ನಿಗಮ ಸಿಬ್ಬಂದಿಗಳು

• ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎ.ಪಿ.ಎಂ.ಸಿ) ಕೆಲಸಗಾರರು

ರಾಜ್ಯ ಸರಕಾರ ಗುರುತಿಸಿರುವ 18 ವಿಧದ ಆದ್ಯತಾ ಗುಂಪುಗಳಿಗೆ (ಅನುಬಂಧ-2 ರಲ್ಲಿ ಇರುವಂತೆ ವಕಿಲರು ಸೇರಿ) ಲಸಿಕಾಕರಣದ ದಿನಾಂಕವನ್ನು ಮುಂದೆ ತಿಳಿಸಲಾಗುವುದು.ಸಾರ್ವಜನಿಕರು ಸಹಕಾರ ನೀಡುವಂತೆ ಕೋರಿದೆ.

 
 
 
 
 
 
 
 
 
 
 

Leave a Reply