ಉಡುಪಿ: ಜಿಲ್ಲೆಯಲ್ಲಿ ಜೂನ್ 28 ರಂದು ಲಭ್ಯವಿರುವ ಲಸಿಕೆಯ ಕುರಿತು ಮಾಹಿತಿ

 ಉಡುಪಿ: ಜಿಲ್ಲೆಯಲ್ಲಿ ಜೂನ್ 28 ರಂದು ಲಭ್ಯವಿರುವ ಲಸಿಕೆಯ ಕುರಿತು ಮಾಹಿತಿ ಇಲ್ಲಿದೆ.

• ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು/ ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಡೋಸ್ ಮತ್ತು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯ.

• ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ)- ಕೋವಿಶೀಲ್ಡ್ ಪ್ರಥಮ ಡೋಸ್- (150 ಡೋಸ್ ಲಭ್ಯ), ಕೋವಿಶೀಲ್ಡ್ 2ನೇ ಡೋಸ್ (50 ಡೋಸ್ ಲಭ್ಯ)

• ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)- ಕೋವಿಶೀಲ್ಡ್ ಪ್ರಥಮ ಡೋಸ್- (50 ಡೋಸ್ ಲಭ್ಯ), ಕೋವಿಶೀಲ್ಡ್ 2ನೇ ಡೋಸ್ (150 ಡೋಸ್ ಲಭ್ಯ)

• ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆಕಟ್ಟಡ (ಅಲಂಕಾರ ಥಿಯೇಟರ್ ಹತ್ತಿರ)- ಕೋವಿಶೀಲ್ಡ್ ಪ್ರಥಮ ಡೋಸ್- (50 ಡೋಸ್ ಲಭ್ಯ), ಕೋವಿಶೀಲ್ಡ್ 2ನೇ ಡೋಸ್ (130 ಡೋಸ್ ಲಭ್ಯ)

• ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿ.ಪ್ರಾ. ಶಾಲೆ, ಇಂದಿರಾನಗರ)- ಕೋವಿಶೀಲ್ಡ್ ಪ್ರಥಮ ಡೋಸ್- (20 ಡೋಸ್ ಲಭ್ಯ), ಕೋವಿಶೀಲ್ಡ್ 2ನೇ ಡೋಸ್ (30 ಡೋಸ್ ಲಭ್ಯ)

• ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ- ಕೋವಿಶೀಲ್ಡ್ 2ನೇ ಡೋಸ್ (100 ಡೋಸ್ ಲಭ್ಯ), ಜುಲೈ 5 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ -(100 ಡೋಸ್ ಲಭ್ಯ)

• ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂನ್ 28 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

• ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply