ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಭೆ

ಉಡುಪಿ: ಜಿಲ್ಲೆಯ ಉಡುಪಿ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಕೋವಿಡ್ – 19 ನಿಯಂತ್ರಣ ಕಾರ್ಯಪಡೆಗಳ ಕಾರ್ಯನಿರ್ವಹಣೆಯ ಬಗ್ಗೆ ಇಂದು ಜಿಲ್ಲಾ ಪಂಚಾಯತ್ ನಲ್ಲಿ ವಿಡಿಯೋ ಕಾನ್ಫರೆನ್ಸ್ ಸಂವಾದ ನಡೆಯಿತು. 

ವೀಡಿಯೋ ಕಾನ್ಫರೆನ್ಸ್ ನಲ್ಲಿ ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಕುರಿತು ಹಾಗೂ ಕೋವಿಡ್ ಕಾರ್ಯಪಡೆಗಳ ಕಾರ್ಯನಿರ್ವಹಣೆಯ ಬಗ್ಗೆ ಮಾಹಿತಿ ಪಡೆದು ಕೆಲವೊಂದು ಸಲಹೆ ಸೂಚನೆಗಳನ್ನು ನೀಡಿದರು.

 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಉಡುಪಿ – ಚಿಕ್ಕಮಗಳೂರು ಸಂಸದ ಶೋಭಾ ಕರಂದ್ಲಾಜೆ, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಟ್ ವೈ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ಸಂಭಂದ ಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply