ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ

ವಿದ್ಯೋದಯ ಟ್ರಸ್ಟ್(ರಿ) ನ ಅಂಗ ಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಯೋಗಾಸನ ಸ್ಪರ್ಧೆ ಆಗಸ್ಟ್ ೨೩ ರಂದು ನಡೆಯಿತು.

ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಎನ್. ನಾಗರಾಜ ಬಲ್ಲಾಳರು ಕಾರ್ಯಕ್ರಮವನ್ನು ಉದ್ಘಾಟಿಸಿ, ಯೋಗವೆಂಬುದು ದೈಹಿಕ, ಮಾನಸಿಕ ಆರೋಗ್ಯವನ್ನು ಗಟ್ಟಿಗೊಳಿಸುತ್ತದೆ. ಹಾಗಾಗಿ ಇವತ್ತಿನ ಸಮಾಜಕ್ಕೆ ಇದು ಅಗತ್ಯ ಎಂದರು.

ಮುಖ್ಯ ಅತಿಥಿಗಳಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ಅವರು ಉಪಸ್ಥಿತರಿದ್ದರು. ಯೋಗಕ್ಕೆ ಜಾಗತಿಕ ಮಟ್ಟದಲ್ಲಿ ಮಹತ್ವ ಸಿಕ್ಕಿರುವ ಈ ಸಂದರ್ಭದಲ್ಲಿ ಶಾಲಾ ಕಾಲೇಜಿನಲ್ಲಿ ಯೋಗಾಭ್ಯಾಸಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಕ್ರೀಡಾ ಸಂಯೋಜಕರಾದ ಶ್ರೀ ದಿನೇಶ ಕುಮಾರ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಶ್ರೀ ಸಂದೀಪ್ ಕುಮಾರ್ ಅವರು ಸ್ವಾಗತಿಸಿದರು. ಸಂಸ್ಕೃತ ಉಪನ್ಯಾಸಕರಾದ ಶ್ರೀ ಶಿವಪ್ರಸಾದ ಭಟ್ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ವೀರೇಂದ್ರ ಶೆಟ್ಟಿಗಾರ್ ಕಾರ್ಯಕ್ರಮವನ್ನು ಸಂಯೋಜಿಸಿದರು.

 
 
 
 
 
 
 
 
 
 
 

Leave a Reply