ವಿಶ್ವಾರ್ಪಣಂ‌ ಕಾರ್ಯಕ್ರಮದ ಪೂರ್ವಭಾವಿ ಸಭೆ

ಶ್ರೀ ಕೃಷ್ಣ ಸೇವಾ ಬಳಗ, ಶ್ರೀ ಅದಮಾರು ಮಠದ ಉಡುಪಿ ಇದರ ವತಿಯಿಂದ ದಿನಾಂಕ 23-03-2024 ಶನಿವಾರ ಸಂಜೆ 4.00 ಗಂಟೆಗೆ ಆಯೋಜಿಸಿರುವ ವಿಶ್ವಾರ್ಪಣಂ‌ ಕಾರ್ಯಕ್ರಮದಲ್ಲಿ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಗುರುವಂದನೆ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಗೌರವಾನ್ವಿತ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸರ್ವರ ಸಹಕಾರ ಯಾಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಶ್ರೀ ಕೃಷ್ಣ ಸೇವಾ ಬಳಗದ ಪದಾಧಿಕಾರಿಗಳು, ಹಿಂದೂ ಸಂಘಟನೆಯ ಪ್ರಮುಖರು, ಬಿಜೆಪಿ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply