ನಾರಾಯಣ ಗುರು ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

ಮಲ್ಪೆಯ ನಾರಾಯಣ ಗುರು ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್
ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಉದ್ಘಾಟನೆಗೊಂಡಿತು.

ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯ ಶಶಿಕುಮಾರ್ ಸ್ವಾಗತಿಸಿದರು. ಗುರುಗಳಾದ ನಿತ್ಯಾನಂದ ಶೆಟ್ಟಿಗಾರ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದರು. ಪ್ರಾಥಮಿಕ ವಿಭಾಗದ
ಮುಖ್ಯ ಶಿಕ್ಷಕಿ ಶ್ರೀಮತಿ ಗೀತಾ ಶೆಟ್ಟಿ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಕೊನೆಗೆ ಶಿಕ್ಷಕಿ ಶ್ರೀಮತಿ ಸಂಧ್ಯಾ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿನಿ ಅನನ್ಯ ಕಾರ್ಯಕ್ರಮ
ನಿರ್ವಹಿಸಿದಳು. ೪೦ ವಿದ್ಯಾರ್ಥಿಗಳು ಯಕ್ಷಗಾನ ತರಬೇತಿಗೆ ಸೇರಿದ್ದಾರೆ. ಆರಂಭದಲ್ಲಿ ಭಾಗವತರಾದ ಗುರು ತೋನ್ಸೆ ಜಯಂತ್ ಕುಮಾರ್ ಇವರಿಗೆ ಶ್ರದ್ಧಾಂಜಲಿ ಪೂರ್ವಕ
ನುಡಿನಮನ ಸಲ್ಲಿಸಲಾಯಿತು.

 
 
 
 
 
 
 
 
 
 
 

Leave a Reply