ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ 25 ಗೋವುಗಳ ದತ್ತು ಸ್ವೀಕಾರ:ಯಶ್‌ಪಾಲ್

ಭಾರತ ದೇಶ ಕಂಡ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದೀಜಿಯವರ 70ನೇ ಹುಟ್ಟು ಹಬ್ಬವನ್ನು ನೀಲಾವರ ಗೋಶಾಲೆಯ ೨೫ ಗೋವುಗಳನ್ನು ತಮ್ಮ ವೈಯುಕ್ತಿಕ ನೆಲೆಯಲ್ಲಿ ದತ್ತು ಸ್ವೀಕರಿಸುವ ಮೂಲಕ ವಿಶಿಷ್ಟವಾಗಿ ಆಚರಿಸುವುದಾಗಿ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಗೋ ಸಂರಕ್ಷಣೆಗೆ ವಿಶೇಷ ಪ್ರೋತ್ಸಾಹ ನೀಡುವ ಉದ್ದೇಶದಿಂದ ಗೋ ಸಂರಕ್ಷಣೆ ಮತ್ತು ಹೈನುಗಾರಿಕೆ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದೇ ಪರಮ ಪೂಜ್ಯ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಅನುಗ್ರಹದೊಂದಿಗೆ 25ಗೋವುಗಳನ್ನು ದತ್ತು ಸ್ವೀಕರಿಸುವುದಾಗಿ ತಿಳಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಗೋವುಗಳ ದತ್ತು ಸ್ವೀಕಾರಕ್ಕೆ ಸಾರ್ವಜನಿಕರಿಗೆ ಪ್ರೇರಣೆ ನೀಡುವ ಉದ್ದೇಶದಿಂದ ಪೇಜಾವರ ಶ್ರೀಗಳ ಮಾರ್ಗದರ್ಶನದಲ್ಲಿ ಶ್ರೀವಿಶ್ವೇಶತೀರ್ಥ ಗೋರಕ್ಷ ಬಳಗ ಸಂಸ್ಥೆಯ ಮೂಲಕ ನರೇಂದ್ರ ಮೋದಿ ಗೋವು ದತ್ತು ಅಭಿಯಾನ ನಡೆಸುವ ವಿಶೇಷ ಯೋಜನೆ ರೂಪಿಸಲಾಗಿದೆ.

ತೀರಾ ವೆಚ್ಚದಾಯಕವಾಗಿರುವ ಗೋಶಾಲೆಗಳನ್ನು ನಿರ್ವಹಿಸುತ್ತಿರುವ ಸಂಸ್ಥೆಗಳು ಕೊರೋನಾ ಸಂದರ್ಭದಲ್ಲಿ ಆರ್ಥಿಕವಾಗಿ ಸಂಕಷ್ಟಕ್ಕೀಡಾ ಗಿರುವ ಹಿನ್ನೆಲೆಯಲ್ಲಿ ಈ ಅಭಿಯಾನದ ಮೂಲಕ ಆರ್ಥಿಕ ಸಹಾಯ ಒದಗಿಸುವ ಜೊತೆ ಜೊತೆಗೆ, ದೇಶದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿ ಪೂಜನೀಯ ಗೋಮಾತೆಯ ಸಂರಕ್ಷಣೆಯತ್ತ ಅಳಿಲು ಸೇವೆ ನೀಡುವ ಉದ್ದೇಶದಿಂದ ರೂಪಿಸಿರುವ ಈ ಅಭಿಯಾನದಲ್ಲಿ ನರೇಂದ್ರ ಮೋದಿಯವರ ಅಭಿಮಾನಿಗಳು, ಸಾರ್ವಜನಿಕರು ಕೈಜೋಡಿಸಿ ಯಶಸ್ವಿಯಾಗಿಸುವಂತೆ ಮನವಿ ಮಾಡುವುದಾಗಿ ಯಶ್‌ಪಾಲ್ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply