ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ : ಯಶ್ ಪಾಲ್ ಸುವರ್ಣ

ಉಡುಪಿ ಜಿಲ್ಲೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಶಿಕ್ಷಣ ವ್ಯವಸ್ಥೆಯಲ್ಲಿ ಉಡುಪಿಯ ಕೀರ್ತಿಯನ್ನು ಪಸರಿಸುವ ಕೆಲಸ ಜಿಲ್ಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರ ಹಾಗೂ ಶಿಕ್ಷಣ ಇಲಾಖೆಯ ಪರಿಶ್ರಮದಿಂದ ಯಶಸ್ವಿಯಾಗಿದೆ.

ದೇಶದ ಭವಿಷ್ಯ ಬರೆಯಲಿರುವ ವಿದ್ಯಾವಂತ ಯುವ ಜನಾಂಗದಿಂದ ಮಾತ್ರ ಸಧೃಡ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಲಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಸಾಧನೆ ಇದೇ ರೀತಿ ನಿರಂತರವಾಗಿ ಮುಂದುವರೆದು ಇತರರಿಗೂ ಮಾದರಿಯಾಗಲಿ ಎಂದು ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಪುಷ್ಪಾನಂದ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಎಸ್.ಎಸ್. ಎಲ್. ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಪಡೆದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 20 ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಶ್ರೀ ವಿಶ್ವನಾಥ ಬಾಯರಿ, ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಹಂಸಾವತಿ ಹಾಗೂ ಶ್ರೀಮತಿ ತಾರಾದೇವಿ ಹಾಗೂ ಸಮಾಜ ಸೇವಕಿ ಶ್ರೀಮತಿ ನಿರುಪಮಾ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. 

ಪುಷ್ಪಾನಂದ ಫೌಂಡೇಶನ್ ವತಿಯಿಂದ 100% ಫಲಿತಾಂಶ ಪಡೆದ ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನಾ ಪತ್ರದೊಂದಿಗೆ ತಲಾ 15 ಸಾವಿರ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. 

ಸಮಾರಂಭದಲ್ಲಿ ಶಾಲೆಯ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply