Janardhan Kodavoor/ Team KaravaliXpress
29.6 C
Udupi
Sunday, February 5, 2023
Sathyanatha Stores Brahmavara

ಯುವಮೋರ್ಚಾ ದಿಂದ “ಯುವ ಹಸಿರು

ಭಾರತೀಯ ಜನತಾ ಪಾರ್ಟಿ  ಕುಂದಾಪುರ ವಿಧಾನಸಭಾ ಕ್ಷೇತ್ರ ಯುವಮೋರ್ಚಾ ದಿಂದ “ಯುವ ಹಸಿರು” ಮೊದಲ  ಕಾರ್ಯಕ್ರಮ ಇಂದು ಬಿಜಾಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಉಳ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.  ರಾಜ್ಯ ಕಾರ್ಯಕಾರಿಣಿ ಸದಸ್ಯ ರಾದ ಕಿರಣ್ ಕೊಡ್ಗಿಯವರು ಸಸಿ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕ್ಷೇತ್ರಾಧ್ಯಕ್ಷರಾದ ಶಂಕರ್ ಅಂಕದಕಟ್ಟೆ ಯವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕ್ಷೇತ್ರ ಪ್ರಧಾನ ಕಾರ್ಯ ದರ್ಶಿಗಳಾದ ಸುರೇಶ್ ಶೆಟ್ಟಿ ಗೋಪಾಡಿ ಹಾಗೂ ಸತೀಶ್ ಪೂಜಾರಿ ವಕ್ವಾಡಿ,  ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಯುವ ಮೋರ್ಚಾ ಜಿಲ್ಲಾದ್ಯಕ್ಷ ವಿಖ್ಯಾತ್ ಶೆಟ್ಟಿ,  ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಯುವಮೋರ್ಚಾ ಜಿಲ್ಲಾ ಪ್ರಮುಖ ವಿನೋದ್ ರಾಜ್ ಶಾಂತಿನಿಕೇತನ, ಕುಂದಾಪುರ ಯುವಮೋರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರು,ಪ್ರಧಾನ ಕಾರ್ಯ ದರ್ಶಿಗಳಾದ ಚೇತನ್ ಬಂಗೇರ ಮತ್ತು ಸುನಿಲ್  ಖಾರ್ವಿ,ಯುವಮೋರ್ಚಾ ಉಪಾಧ್ಯಕ್ಷರಾದ ಅಭಿಷೇಕ್ ಅಂಕದಕಟ್ಟೆ,
ಸುಧೀರ್ ಮಲ್ಯಾಡಿ, ಯುವ ಮೋರ್ಚಾ ಕಾರ್ಯದರ್ಶಿಗಳಾದ ಅಭಯ್ ದೀಕ್ಷಿತ್ ಶೆಟ್ಟಿ, ಅರುಣ್ ಕುಮಾರ್, ಸಫಲ್ ಶೆಟ್ಟಿ,ಸಂತೋಷ್ ಪೂಜಾರಿ, ಮಹಿಳಾ ಮೋರ್ಚಾ ಅಧ್ಯಕ್ಷರಾದ ರೂಪಾ ಪೈ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಲತಾ ಸುರೇಶ್ ಶೆಟ್ಟಿ, ಶಾನಾಡಿ ಸಂಪತ್  ಕುಮಾರ್ ಶೆಟ್ಟಿ, ರೈತ ಮೋರ್ಚಾ ಅಧ್ಯಕ್ಷ ಸುನಿಲ್ ಶೆಟ್ಟಿ ,ಹಾಗೂ ಬಿಜಾಡಿ ಮಹಾಶಕ್ತಿಕೇಂದ್ರ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಉಳ್ತೂರು, ಪ್ರತಾಪ್ ಶೆಟ್ಟಿ ಉಳ್ತೂರು, ಯುವ ಮೋರ್ಚಾದ ಮಂಡಲ ಮತ್ತು ಎಲ್ಲಾ  ಮಹಾಶಕ್ತಿ ಕೇಂದ್ರದ  ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳು ,ಕಾರ್ಯಕಾರಿಣಿ ಸದಸ್ಯರು ಹಾಗೂ ಬಿಜೆಪಿ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ 200 ಸಸಿಗಳನ್ನು ನಡಲಾಯಿತು.  6 ಮಹಾಶಕ್ತಿಕೇಂದ್ರಗಳಲ್ಲಿ ತಲಾ 200 ರಂತೆ 1200 ಸಸಿಗಳನ್ನು  ಮುಂದಿನ ದಿನಗಳಲ್ಲಿ ನೆಡಲಿದ್ದೇವೆ ಎಂದು ಕುಂದಾಪುರ ಯುವಮೋರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರು ಪ್ರಕಟಣೆಯಲ್ಲಿ ತಿಳಿಸಿದರು.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!