ನಾಪತ್ತೆಯಾಗಿದ್ದ ಯುವಕನ ಶವ ಸಮುದ್ರದಲ್ಲಿ ಪತ್ತೆ..!!

ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಚೆಂಬುಗುಡ್ಡೆ ನಿವಾಸಿಯ ಮೃತದೇಹ ಮಂಜೇಶ್ವರ ಸಮುದ್ರದಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರು ಇದೊಂದು ಕೊಲೆ ಎಂಬ  ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತ ಯುವಕ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ನಿವಾಸಿ ಝಾಕಿರ್ ಎಂದು ಗುರುತಿಸಲಾಗಿದೆ. ಝಾಕಿರ್ ಇವರು ಮೀನು ವ್ಯಾಪಾರಿಯಾಗಿದ್ದು, ಏಳು ವರ್ಷದ ಮಗು ಮತ್ತು ಏಳು ತಿಂಗಳ ಗರ್ಭಿಣಿ ಪತ್ನಿಯನ್ನು ಅಗಲಿದ್ದಾರೆ. 

ಸಪ್ಟೆಂಬರ್ ೨೬ರಂದು ತೊಕ್ಕೊಟ್ಟಿಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟಿದ್ದರು. ಬಳಿಕ ಹಿಂದಿರುಗಿ ಬಂದಿರಲಿಲ್ಲ. ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿತ್ತು. ಹತ್ತು ದಿನಗಳಾದರೂ ಸಂಪರ್ಕಕ್ಕೆ ಸಿಗದ ಝಾಕಿರ್,ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಇವರು ಸ್ಥಿತಿವಂತರಾಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆ ಇಲ್ಲ, ಇದೊಂದು ಕೊಲೆ ಎಂದು ಝಾಕಿರ್ ಕುಟುಂಬಸ್ಠರು ಶಂಕೆ ವ್ಯಕ್ತಪಡಿಸಿದ್ದಾರೆ. ಕುಟುಂಬಸ್ಠರು ಇದೀಗ ಶೀಘ್ರ ತನಿಖೆಗೆ ಆಗ್ರಹಿಸಿದ್ದಾರೆ. 

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply