ಡಾ| ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು, ವಿಕಿ ಇ-ಲರ್ನಿಂಗ್ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ

ಡಾ| ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು, ಉಡುಪಿ ಇಲ್ಲಿನ ಗಣಕ ವಿಜ್ಞಾನ ವಿಭಾಗವು ಕರಾವಳಿ ವಿಕಿಮೀಡಿಯನ್ಸ್ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿರುವ ವಿಕಿ ಇ-ಲರ್ನಿಂಗ್ ಸರ್ಟಿಫಿಕೇಟ್ ಕೋರ್ಸಿನ ಉದ್ಘಾಟನಾ ಸಮಾರಂಭವು ಕಾಲೇಜಿನಲ್ಲಿ ದಿನಾಂಕ 04-06-2022ರಂದು ನಡೆಯಿತು.
ಕರಾವಳಿ ವಿಕಿಮೀಡಿಯನ್ಸ್ ಸಂಸ್ಥೆಯ ಖಜಾಂಚಿ ಹಾಗೂ ಪೆರ್ಲದ ನಳಂದಾ ಕಲೆ ಮತ್ತು ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾದ ಡಾ. ಕಿಶೋರ್ ಕುಮಾರ್ ರೈ ಇವರು ಕಾರ್ಯಕ್ರಮವನ್ನು ಹೂವಿನ ಗಿಡಕ್ಕೆ ನೀರೆರೆದು ಉದ್ಘಾಟಿಸಿ, ಕನ್ನಡ ವಿಕಿಪೀಡಿಯದ ಬೆಳವಣಿಗೆಯಲ್ಲಿ ಕರಾವಳಿ ವಿಕಿಮೀಡಿಯನ್ಸ್ ಸಂಸ್ಥೆಯ ಕೊಡುಗೆ ಮತ್ತು ಕೋರ್ಸಿನ ಉಪಯುಕ್ತತೆಯ ಬಗ್ಗೆ ತಿಳಿಸಿದರು. ಕೋರ್ಸಿನ ರೂವಾರಿ, ಕರಾವಳಿ ವಿಕಿಮೀಡಿಯನ್ಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಯು. ಬಿ. ಪವನಜ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾಲೇಜಿನ ಪ್ರಾಚಾರ್ಯ ಡಾ. ಭಾಸ್ಕರ್ ಶೆಟ್ಟಿ ಎಸ್. ಅಧ್ಯಕ್ಷತೆ ವಹಿಸಿದ್ದರು. ಕೋರ್ಸಿನ ಸಂಯೋಜಕ ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರಾದ ಶ್ರೀ. ರಾಮಚಂದ್ರ ಅಡಿಗ ಜಿ. ನಿರೂಪಿಸಿ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ಶ್ರೀ. ಸೋಜನ್‌ ಕೆ. ಜಾರ್ಜ್‌ ವಂದಿಸಿದರು.

 
 
 
 
 
 
 
 
 
 
 

Leave a Reply