ಚಿತ್ರ ಬಿಡಿಸುವ, ಪುಸ್ತಕ ಓದುವ ಸ್ಪರ್ಧೆ

ಉಡುಪಿ: ನಗರ ಕೇಂದ್ರ ಗ್ರಂಥಾಲಯ ಉಡುಪಿ ಇವರ ವತಿಯಿಂದ ವಿದ್ಯಾ ವಾಚಸ್ಪತಿ ಡಾ ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದ ಮಕ್ಕಳ ಸಮುದಾಯ ಕೇಂದ್ರದಲ್ಲಿ ರಾಷ್ಟ್ರೀಯ ಗ್ರಂಥಾಲಯ
ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸುವ ಮತ್ತು ಪುಸ್ತಕ ಓದುವ ಸ್ಪರ್ಧೆ ನಡೆಯಿತು. ಸಾಹಿತಿ ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಕಾರ್ಯಕ್ರಮ ಉದ್ಘಾಟಿಸಿ, ಗ್ರಂಥಾಲಯ ಪಿತಾಮಹ ಎಸ್.ಆರ್. ರಂಗನಾಥನ್ ಅವರ ಸಾಧನೆ ಹಾಗೂ ಅವರು ಗ್ರಂಥಾಲಯಕ್ಕೆ ನೀಡಿದ ಕೊಡುಗೆ ಬಗ್ಗೆ
ವಿವರಿಸಿದರು. ವಿದ್ಯಾರ್ಥಿಗಳು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಗ್ರಂಥಾಯದಲ್ಲಿನ ಪುಸ್ತಕಗಳನ್ನು
ಓದುವುದರಿಂದ ಸುಸಂಸ್ಕೃತ ನಾಗರಿಕರಾಗಲು ಸಾಧ್ಯ ಎಂದರು.
ನಗರ ಗ್ರಂಥಾಲಯ ಪ್ರಾಧಿಕಾರದ ಸದಸ್ಯೆ ಹಾಗೂ ಡಾ ಜಿ.ಶಂಕರ ಪ್ರಥಮ ದರ್ಜೆ ಕಾಲೇಜಿನ ಡಾ. ನಿಕೇತನ ಉಪಸ್ಥಿತರಿದ್ದರು.
ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಸ್ವಾಗತಿಸಿದರು. ಗ್ರಂಥಪಾಲಕಿ ಸಿ. ರಂಜಿತಾ ನಿರೂಪಿಸಿ,
ಪ್ರಥಮ ದರ್ಜೆ ಸಹಾಯಕಿ ಪ್ರೇಮ ಎಂ. ವಂದಿಸಿದರು.

Leave a Reply