ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,62,664 ಮಂದಿ ಗುಣಮುಖ

ನವದೆಹಲಿ: ದೇಶಾದ್ಯಂತ 24 ಗಂಟೆಗಳಲ್ಲಿ 92,596 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,90,89,069 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಕಳೆದ 24 ತಾಸಿನಲ್ಲಿ 1,62,664 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 12,31,415 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ 2,75,04,126 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 2219 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,53,528 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

 ಇಲ್ಲಿಯವರೆಗೆ ಒಟ್ಟು 23,90,58,360 ಡೋಸ್ ಲಸಿಕೆ ನೀಡಲಾಗಿದೆ.ಜೂನ್ 8 ರಂದು 19,85,967 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 37,01,93,563 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.

 
 
 
 
 
 
 
 
 
 
 

Leave a Reply