ಉಡುಪಿ ಜಿಲ್ಲೆಯಲ್ಲಿಯೂ ವಾರಾಂತ್ಯ ಕರ್ಫ್ಯೂ ಜಾರಿ- ಉಡುಪಿ ಡಿಸಿ ಆದೇಶ

ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದೆ.

ಇದೀಗ ಉಡುಪಿ ಜಿಲ್ಲೆಗೆ ಅನ್ವಯವಾಗುವಂತೆ ಜಿಲ್ಲೆಯಲ್ಲಿಯೂ ವಾರಾಂತ್ಯ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.

ಅದರಂತೆ ಇಂದಿನಿಂದ ಜ.19 ರ ಬೆಳಿಗ್ಗೆ 5.00 ರವರೆಗೆ ವಾರಾಂತ್ಯ ಕರ್ಫ್ಯೂ ಇರಲಿದ್ದು ಪ್ರತಿ ಶುಕ್ರವಾರ ರಾತ್ರಿ 8. ಗಂಟೆಯಿಂದ ಸೋಮವಾರ ಬೆಳಿಗ್ಗೆ 5.ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತವೆ.

ವೀಕೆಂಡ್ ಕರ್ಫ್ಯೂನ ಅವಧಿಯಲ್ಲಿ ಅಗತ್ಯ ಮತ್ತು ತುರ್ತು ಚಟುವಟಿಕೆಗಳಿಗೆ ಹೊರತುಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್ ಗಳು ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

ಬೀದಿಬದಿ ವ್ಯಾಪಾರಸ್ಥರಿಗೆ, ಸಾರ್ವಜನಿಕ ವಿತರಣ ವ್ಯವಸ್ಥೆ (PDS)ಯ ಅಂಗಡಿಗಳಿಗೆ ಕಾರ್ಯಾಚರಿಸಲು ಅವಕಾಶ‌ ನೀಡಲಾಗಿದೆ.

ಜನರು ಮನೆಯಿಂದ ಹೊರಕ್ಕೆ ಸಂಚರಿಸುವುದನ್ನು ಕಡಿಮೆ ಮಾಡಲು COVID 19 ನಿರ್ವಹಣೆಗಾಗಿರುವ ರಾಷ್ಟ್ರೀಯ ನಿರ್ದೇಶನಗಳಿಗೆ ಬದ್ಧರಾಗಿ 24×7 ಹೋಮ್‌ ಡೆಲಿವರಿ ಸೇವೆಗಳನ್ನು ನೀಡಲು ಪ್ರೋತ್ಸಾಹಿಸುವಂತೆ ಸೂಚನೆ ನೀಡಲಾಗಿದೆ.

ರೆಸ್ಟೋರೆಂಟ್‌ಗಳಲ್ಲಿ ಮತ್ತು ತಿನಿಸುಕೇಂದ್ರಗಳಲ್ಲಿ, ಆಹಾರಗಳನ್ನು ತೆಗೆದುಕೊಂಡು ಹೋಗಲು ಮತ್ತು ಹೋಮ್ ಡೆಲಿವರಿಗಳನ್ನು ಮಾತ್ರ ಅನುಮತಿ ನೀಡಲಾಗಿದೆ.

ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಇತ್ಯಾದಿ, ತುರ್ತು, ಅಗತ್ಯ ಸೇವೆಗಳು ಮತ್ತು COVID 19 ಕಂಟೈನ್ಮೆಂಟ್ ಮತ್ತು ಮ್ಯಾನೇಜ್ಮೆಂಟ್ ಕರ್ತವ್ಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಇಂತಹ ಸಂಸ್ಧೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು/ಸಿಬ್ಬಂದಿಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ.

ಎಲ್ಲಾ ಸಾರ್ವಜನಿಕ ಪಾರ್ಕ್ ಗಳನ್ನು ಮುಚ್ಚಿರುತ್ತದೆ. ಎಲ್ಲಾ ಕೈಗಾರಿಕೆಗಳು, ಐಟಿ,‌ ಸಂಸ್ಥೆಗಳ ಕಾರ್ಯಾಚರಣೆಗೆ ಕರ್ಫ್ಯೂ ವಿನಿಂದ ವಿನಾಯಿತಿ ನೀಡಲಾಗಿದೆ. ಅಂತಹ ಸಂಸ್ಥೆಗಳ ನೌಕರರು ಆಯಾ ಸಂಘ/ ಸಂಸ್ಥೆ ನೀಡುವ ಗುರುತಿನ ಚೀಟಿಯೊಂದಿಗೆ ಸಂಚಾರಿಸಬಹುದಾಗಿದೆ.

ರೋಗಿಗಳು ಮತ್ತು ಅವರ ಪರಿಚಾರಕರು / ತುರ್ತು ಅಗತ್ಯವಿರುವ ವ್ಯಕ್ತಿಗಳು, ವ್ಯಾಕ್ಸಿ ನೇಷನ್ ತೆಗೆದುಕೊಳ್ಳಲು ಉದ್ದೇಶಿಸಿರುವ ಅರ್ಹರು ಕನಿಷ್ಠ ದಾಖಲೆಗಳೊಂದಿಗೆ ಸಂಚರಿಸಲು ಅನುಮತಿ ನೀಡಲಾಗಿದೆ.

ಬಸ್‌, ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ. ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕೆ, ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣ ಗಳಿಂದ, ರೈಲ್ವೆ ನಿಲ್ದಾಣಗಳಿಂದ, ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದೆ.

ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು/ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಮತ್ತು ಕೋವಿಡ್‌ 19 ಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪಾಲಿಸುವ ಷರತ್ತುಗಳೊಂದಿಗೆ ಸಂಚಾರಕ್ಕೆ ಅನುಮತಿಸಲಾಗಿದೆ. ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಹಾಗೂ ರಾಜ್ಯ ಸರ್ಕಾರದಿಂದ ಹೊರಡಿಸಲ್ಪಡುವ ಮಾರ್ಗಸೂಚಿಗಳನ್ವಯ ಮದುವೆ ಕಾರ್ಯಕ್ರಮವನ್ನು ತೆರೆದ ಪ್ರದೇಶಗಳಲ್ಲಿ 200 ಜನರಿಗೆ ಸೀಮಿತವಾಗಿ ಹಾಗೂ ಸಭಾಂಗಣದಲ್ಲಿ 100 ಜನರಿಗೆ ಸೀಮಿತವಾಗಿ ನಡೆಸಲು ಅವಕಾಶ ಕಲ್ಪಿಸಲಾಗಿದೆ.

 
 
 
 
 
 
 
 
 
 
 

Leave a Reply