ಉಡುಪಿ ಜು.17 ರಂದು ಕೋವಿಡ್-  ಲಸಿಕೆ ಲಭ್ಯತೆ ವಿವರ

ಉಡುಪಿ: ಜಿಲ್ಲೆಯಲ್ಲಿ ಜುಲೈ 17 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ -100 ಡೋಸ್.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡದಲ್ಲಿ (ಅಲಂಕಾರ್ ಥಿಯೇಟರ್ ಹತ್ತಿರ) 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ) 2 ನೇ ಡೋಸ್ ಕೋವಿಶೀಲ್ಡ್
150 ಡೋಸ್ 

ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲೈ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆಯನ್ನು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3.30 ರ ವರೆಗೆ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು

ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2 ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply