Janardhan Kodavoor/ Team KaravaliXpress
26.6 C
Udupi
Monday, June 27, 2022
Sathyanatha Stores Brahmavara

ರಿವಲ್ವಾರ್ ತೋರಿಸಿ ಸುಲಿಗೆ ಮಾಡಿದ್ದ ಆರೋಪಿಗಳಿಗೆ ಜೈಲು ಶಿಕ್ಷೆ .

ಉಡುಪಿ: ಮನೆ ಹಾಗೂ ಅಂಗಡಿಯಲ್ಲಿದ್ದ ನಗದು, ಚಿನ್ನಾಭರಣ ಹಾಗೂ ಮೊಬೈಲ್ ಫೋನ್‌ಗಳನ್ನು ಸುಲಿಗೆ ಮಾಡಿದ್ದ ಆರೋಪಿಗಳಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2008 ಡಿಸೆಂಬರ್ 8 ರಂದು ರಾತ್ರಿ 9 ಗಂಟೆಯ ಸುಮಾರಿಗೆ ಉಡುಪಿಯ ಮಾರಾಳಿ ಗ್ರಾಮದ ಉಮಾನಾಥ ಶೆಟ್ಟಿ, ಬೆಂಗಳೂರಿನ ಮಾರತ್ ಹಳ್ಳಿಯ ಶ್ರೀಧರ್ ಆಲಿಯಾಸ್ ಪ್ರಕಾಶ್, ಹಾಸನದ ಸುನೀಲ್ ಕುಮಾರ್ ಹಾಗೂ ಮಂಗಳೂರು ಕಂದಾವರ ಗ್ರಾಮದ ಸಂತೋಷ್ ಅಲಿಯಾಸ್ ಅಲ್ವಿನ್ ಪಿಂಟೋ ಎಂಬ ನಾಲ್ಕು ಜನ ಆರೋಪಿಗಳು, ಉಡುಪಿ ತಾಲೂಕು ನಾಲ್ಕೂರು ಗ್ರಾಮದ ಮುದ್ದೂರಿನ ಬಾಲಕೃಷ್ಣ ವೈದ್ಯ ಎಂಬ ವ್ಯಕ್ತಿಯ ಮನೆ ಮತ್ತು ಅಂಗಡಿಗೆ ಪ್ರವೇಶಿಸಿ, ರಿವಾಲ್ವರ್ ತೋರಿಸಿ, ಬೆದರಿಕೆ ಹಾಕಿ, ಮನೆಯಲ್ಲಿದ್ದ ಮೂವರನ್ನು ಕಟ್ಟಿಹಾಕಿ, 15​,​000 ರೂ. ನಗದು, 71 ಪವನ್ ಚಿನ್ನ ಮತ್ತು 5 ಮೊಬೈಲ್ ಫೋನ್‌ಗಳನ್ನು ಸುಲಿಗೆ ಮಾಡಿರುವ ಹಿನ್ನೆಲೆ, ಹೆಬ್ರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.    

   ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ದೀಪಾ ರವರು ಆರೋಪಿಗಳಾದ ಉಮಾನಾಥ ಶೆಟ್ಟಿ,  ಸುನೀಲ್ ಕುಮಾರ್ ಹಾಗೂ ಸಂತೋಷ್ ಅಲಿಯಾಸ್ ಅಲ್ವಿನ್ ಪಿಂಟೋ ರವರಿಗೆ 3 ವರ್ಷ 6 ತಿಂಗಳು ಕಾರಾಗೃಹ ವಾಸ ಶಿಕ್ಷೆ ಹಾಗೂ 10500 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ.​ ಸರಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ಬದರಿನಾಥ ನ್ಯಾರಿ ಮತ್ತು ಜಯಂತಿ ಕೆ ವಾದ ಮಂಡಿಸಿರುತ್ತಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!