ವೀಡಿಯೋ ಚಿತ್ರೀಕರಣ~ 3 ಮಸ್ಲಿಮ್ ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು

ಉಡುಪಿ: ನಗರದ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿ ಯೋರ್ವಳ ವೀಡಿಯೋ ಚಿತ್ರೀಕರಣ ಮಾಡಿದ ಕುರಿತು ಮಲ್ಪೆ ಠಾಣೆಯಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಗಳ ವಿರುದ್ದ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್, ಕರ್ನಾಟಕರವರ ಅನುದಾನದ ಅಡಿಯಲ್ಲಿ Netra Jyothi Institute of Allied Health Sciences ಎಂಬ ಶಿಕ್ಷಣ ಸಂಸ್ಥೆ ಪ್ಯಾರಾ ಮೆಡಿಕಲ್ಗೆ ಸಂಬಂಧಿಸಿ ಡಿಪ್ಲೋಮ ಮತ್ತು ಡಿಗ್ರಿ ತರಗತಿಗಳನ್ನು ನಡೆಸುತ್ತಿರುತ್ತದೆ.

ಜುಲೈ 20ರಂದು ಮಧ್ಯಾಹ್ನ 12:30 ಗಂಟೆಗೆ ಕಾಲೇಜಿನ ವಿಧ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಆರೋಪಿ ಗಳಾದ ಶಬನಾಝ್, ಅಲ್ಫೀಯಾ, ಅಲೀಮಾ ಎಂಬ ವಿದ್ಯಾರ್ಥಿನಿಯರು ತಮ್ಮದೇ ಕಾಲೇಜಿನ ವಿದ್ಯಾರ್ಥಿನಿ ಯೋರ್ವಳ ವೀಡಿಯೋ ಚಿತ್ರೀಕರಣ ಮಾಡಿದ್ದು ಆಕೆಯ ಗಮನಕ್ಕೆ ಬಂದ ಕೂಡಲೇ ಅವರ ಸಮಕ್ಷಮದಲ್ಲಿಯೇ ವೀಡಿಯೋ ಡಿಲೀಟ್ ಮಾಡಿ ಕ್ಷಮೆ ಯಾಚಿಸಿರುತ್ತಾರೆ

ವಿಧ್ಯಾರ್ಥಿನಿಯರಿಂದ ಮೂರು ಮೊಬೈಲ್ಗಳನ್ನು ಕಾಲೇಜು ಆಡಳಿತ ಮಂಡಳಿಯವರು ತಮ್ಮ ವಶಕ್ಕೆ ಪಡೆದುಕೊಂಡಿರುವುದಾಗಿಯೂ ತಿಳಿದು ಬಂದಿದ್ದು, ಆದರೆ ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಲು ಯಾರೂ ಸಹ ದೂರನ್ನು ನೀಡಿರುವುದಿಲ್ಲ.

ಜುಲೈ 25 ರಂದು ಅಡಳಿತ ಮಂಡಳಿ ಯವರು ನಡೆಸಿದ ಪತ್ರಿಕಾ ಗೋಷ್ಠಿ ಯಲ್ಲಿ ತಾವು ವಿಡಿಯೋ ಮಾಡಿದ್ದೇವೆ ಎಂದು ಮಕ್ಕಳು ತಪ್ಪೊಪ್ಪಿಗೆ ನೀಡಿ ರುತ್ತಾರೆ, ಆ ಉದ್ದೇಶಕ್ಕೆ ಅವರನ್ನು ಅಮಾನತು ಮಾಡಿರುತ್ತೇವೆ ಎಂದು ತಿಳಿಸಿದ ಬಗ್ಗೆ ವರದಿಯಾಗಿರುತ್ತದೆ.

ಈ ಹಿನ್ನಲೆಯಲ್ಲಿ , ಇದೊಂದು ಅಪರಾಧ ಆಗಿರುವುದ ರಿಂದ, ಮಹಿಳೆಯ ಮಾನ ಮತ್ತು ಗೌರವಕ್ಕೆ ಧಕ್ಕೆ ಉಂಟಾಗುವ ರೀತಿಯಲ್ಲಿ ಅವಳ ಖಾಸಗಿತನದ ವಿಡಿಯೋವನ್ನು ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿ, ವಿಷಯ ತಿಳಿದ ಕೂಡಲೇ ಡಿಲೀಟ್ ಮಾಡಿರುವ ವಿಧ್ಯಾರ್ಥಿನಿಯರ ವಿರುದ್ಧ ಹಾಗೂ ಆಡಳಿತ ಮಂಡಳಿಯ ವಿರುದ್ಧ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚುವ ಉದ್ದೇಶದಿಂದ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ನೇತ್ರ ಜ್ಯೋತಿ ಎಂಬ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡೀಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿ ತನಿಖೆಯಲ್ಲಿರುತ್ತವೆ.

ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲಿಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಕೃತ್ಯ, ವ್ಯಕ್ತಿಯ ಖಾಸಗಿ ಚಿತ್ರವನ್ನು ಚಿತ್ರೀಕರಿಸುವ ಕೃತ್ಯ ಮಾಹಿತಿಯನ್ನು ಮತ್ತು ದಸ್ತಾವೇಜನ್ನು ಹಾಜರುಪಡಿಸಲು ತಪ್ಪುವ ಕೃತ್ಯದ ಅಡಿಯಲ್ಲಿ ಮಲ್ಪೆ ಠಾಣಾ ಪಿಎಸ್ಐ ರವರು ಸ್ವಯಂ ಪ್ರೇರಿತವಾಗಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ.

ಈ ಘಟನೆಗೆ ಸಂಬಂಧಿಸಿದಂತೆ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮರಾ ಮೂಲಕ ವಿಡಿಯೋ ಚಿತ್ರೀಕರಿಸಿ ಪಾರ್ವಡ್ ಮಾಡಿರುತ್ತಾರೆ ಎಂದು ಎಡಿಟ್ ಮಾಡಿದ ವಿಡಿಯೋ One India Kannadaಯೂ-ಟ್ಯೂಬ್ ಚಾನಲ್ನಲ್ಲಿ ಅಪ್ಲೋಡ್ ಆಗಿದ್ದು ಅದನ್ನು ಕಾಲು ಸಿಂಗ್ ಚೌಹಾಣ್ ಎಂಬ ವ್ಯಕ್ತಿ ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ಆಕ್ಷೇಪಾರ್ಹ ಸುಳ್ಳುಸುದ್ದಿ ಹಬ್ಬಿಸುತ್ತಿರುವುದು ಕಂಡು ಬಂದಿ ರುವುದರಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮು ದ್ವೇಷ ಉಂಟು ಮಾಡಿ ಸೌಹಾರ್ಧತೆಗೆ ಭಾದಕವಾಗುವ ಕೃತ್ಯದ ಅಡಿಯಲ್ಲಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದ್ದು, ತನಿಖೆ ಕೈಗೊಳ್ಳಲಾ ಗಿರುತ್ತದೆ.

 
 
 
 
 
 
 
 
 
 
 

Leave a Reply