ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಯ ಹತ್ಯೆ ಪ್ರಕರಣ: ಮಾಜಿ ಕಾರು ಚಾಲಕ ಅಂದರ್

ಬೆಂಗಳೂರು: ರಾಜ್ಯವನ್ನು ಬೆಚ್ಚಿ ಬೀಳಿಸಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಮಾಜಿ ಕಾರು ಚಾಲಕನನ್ನು ಸೋಮವಾರ ಬಂಧಿ ಸಿದ್ದಾರೆ.

ಇಲಾಖೆಯ ಹಿರಿಯ ಅಧಿಕಾರಿ ಪ್ರತಿಮಾ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಎಂದು ಗುರುತಿಸಲಾದ ವ್ಯಕ್ತಿ ಮೊದಲು ಕಾಣೆಯಾಗಿದ್ದ. ಇತ್ತೀಚೆಗೆ ಕಿರಣ್ ನನ್ನು ಇಲಾಖೆಯ ಕೆಲಸದಿಂದ ತೆಗೆದು ಹಾಕಲಾಗಿತ್ತು ಮತ್ತು ಅವರ ಬದಲಿಗೆ ಇನ್ನೊಬ್ಬ ಚಾಲಕನನ್ನು ನೇಮಿಸಲಾಗಿತ್ತು. ಘಟನೆಯ ನಂತರ ಕಿರಣ್ ನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ 8.30ರ ಸುಮಾರಿಗೆ ಸುಬ್ರಹ್ಮಣ್ಯಪುರ ಪೊಲೀಸ್ ವ್ಯಾಪ್ತಿಯ ದೊಡ್ಡಕಲ್ಲಸಂದ್ರದಲ್ಲಿರುವ ಅವರ ನಿವಾಸದಲ್ಲಿ ಪ್ರತಿಮಾ ಕೆ ಎಸ್ (45) ಅವರ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಮಹಿಳೆಯನ್ನು ಆಕೆಯ ಕೋಣೆಯೊಳಗೆ ಕೊಲೆ ಮಾಡಲಾಗಿದೆ.

ಪ್ರತಿಮಾಳನ್ನು ಮೊದಲು ಕತ್ತು ಹಿಸುಕಿ ನಂತರ ಕತ್ತು ಸೀಳಲಾಯಿತು. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ.  ಆಕೆಗೆ ಪರಿಚಯವಿರುವ ಯಾರೋ ಮನೆಗೆ ನುಗ್ಗಿ ಆಕೆಯನ್ನು ಕೊಂದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ನಗರದಲ್ಲಿ ಕೆಲಸ ಮಾಡುತ್ತಿರುವ ಪ್ರತಿಮಾ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಮರಳಿದ್ದರು ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ರಾಹುಲ್ ಕುಮಾರ್ ಶಹಾಪುರವಾಡ್ ತಿಳಿಸಿದ್ದಾರೆ. ಆಕೆಯನ್ನು ರಾತ್ರಿಯಲ್ಲಿ ಕೊಲೆ ಮಾಡಿರಬಹುದು ಎಂದು ನಾವು ಅನುಮಾನಿಸುತ್ತೇವೆ. ತನಿಖೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಶಹಾಪುರವಾಡ್ ಹೇಳಿದ್ದಾರೆ.

ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ (ಎಫ್‌ಎಸ್‌ಎಲ್) ಮತ್ತು ಇತರ ತಾಂತ್ರಿಕ ಅಧಿಕಾರಿಗಳು ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾದರಿಗಳು ಮತ್ತು ಇತರ ವಿವರಗಳನ್ನು ಸಂಗ್ರಹಿಸಿದ್ದಾರೆ. ಪ್ರತಿಮಾ ಅವರ ಪತಿ ಸೂರ್ಯನಾರಾಯಣ ಶಿವಮೊಗ್ಗದ ತೀರ್ಥಹಳ್ಳಿ ಬಳಿ ವಾಸವಿದ್ದು, ಇವರಿಗೆ 16 ವರ್ಷದ ಮಗನಿದ್ದಾನೆ.

 
 
 
 
 
 
 
 
 
 
 

Leave a Reply